ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಅಧ್ಯಕ್ಷರಾದ ಡಾ.ಟಿ.ಶ್ಯಾಮ್ ಭಟ್ ಹಾಗೂ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು ಮಾರ್ಚ್ 25 ಹಾಗೂ 26ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅವರು ಮಾರ್ಚ್ 25ರಂದು ಬೆಳಗ್ಗೆ 8.40ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಬೆಳಗ್ಗೆ 10.10ಕ್ಕೆ ಹೈದ್ರಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬಳಿಕ 10.30ಕ್ಕೆ ಹೈದ್ರಾಬಾದ್ ವಿಮಾನ ನಿಲ್ದಾಣದಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ಮಧ್ಯಾಹ್ನ 2.30ಕ್ಕೆ ರಾಯಚೂರು ನಗರಕ್ಕೆ ಆಗಮಿಸಿ ವಿಶ್ರಾಂತಿ ಮಾಡುವರು. ಮಧ್ಯಾಹ್ನ 3 ಗಂಟೆಯಿಂದ ಸಂಜೆ 6.30ರವರೆಗೆ ವಿವಿಧೆಡೆ ಭೇಟಿ ನೀಡುವರು. ಬಳಿಕ ರಾಯಚೂರಿನ ಗೆಸ್ಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡುವರು.
ಮಾರ್ಚ್ 26ರ ಬೆಳಿಗ್ಗೆ 9.30 ರಿಂದ 11 ಗಂಟೆವರೆಗೆ ವಿವಿಧೆಡೆ ಭೇಟಿ ನೀಡುವರು. ಬಳಿಕ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆವರೆಗೆ ಆಯೋಗದ ಸಭೆ ನಡೆಸುವರು. ಮಧ್ಯಾಹ್ನ 12 gangeyinda 1 ಗಂಟೆವರೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂವಾದ ನಡೆಸುವರು. 1 ಗಂಟೆಯಿಂದ 1.30ರವರೆಗೆ ಪತ್ರಿಕಾಗೋಷ್ಠಿ ನಡೆಸುವರು. ಮಧ್ಯಾಹ್ನ 1.30 ರಿಂದ ಊಟದ ವಿರಾಮದ ಬಳಿಕ ಮಧ್ಯಾಹ್ನ 3 ಗಂಟೆಗೆ ರಾಯಚೂರ ನಗರದಿಂದ ನಿರ್ಗಮಿಸಿ ಹೈದ್ರಾಬಾದ್‌ಗೆ ತೆರಳಿ ಅಲ್ಲಿಂದ ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ಆಯೋಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಗೌತಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *