ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಾರ್ಚ್ 23ರ ಸೋಮವಾರ ದಂದು 101 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ವಿಜ್ಞಾನ ವಿಷಯದಲ್ಲಿ ಒಟ್ಟು 30,813 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 705 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ 4,098 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 89 ವಿದ್ಯಾರ್ಥಿಗಳು ಗೈರಾಗಿದ್ದಾರೆ, ಲಿಂಗಸುಗೂರು ತಾಲ್ಲೂಕಿನಲ್ಲಿ 6,216 ಹಾಜರಾಗಿ 121 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮಾನ್ವಿ ತಾಲ್ಲೂಕಿನಲ್ಲಿ 5,527 ವಿದ್ಯಾರ್ಥಿಗಳು ಹಾಜರಾಗಿ 177 ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಯಚೂರು ತಾಲ್ಲೂಕಿನಲ್ಲಿ 9,344 ಹಾಜರಾಗಿದ್ದು, 230 ವಿದ್ಯಾರ್ಥಿಗಳು ಗೈರಾಗಿದ್ದಾರೆ ಹಾಗೂ ಸಿಂಧನೂರು ತಾಲ್ಲೂಕಿನಲ್ಲಿ 5,628 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 88 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

