ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿ ವರ್ಷದಂತೆ ಈ ವರ್ಷವೂ 2026-27ನೇ ಸಾಲಿಗೆ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 119ನೇ ಜನ್ಮ ದಿನಾಚರಣೆಯನ್ನು 05-04-2026 ರಂದು ಆಚರಿಸುವ ಸಲುವಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾರ್ಚ್ 24ರ ಬೆಳಿಗ್ಗೆ 11 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಯ ಮುಖಂಡರು ಸಭೆಗೆ ಹಾಜರಾಗಿ ಸಲಹೆ-ಸೂಚನೆಗಳನ್ನು ನೀಡಬಹುದಾಗಿದೆ. ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *