ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ-1ರ ಶಾಖೆ 2ರಲ್ಲಿ ಡಿ-ಮಾರ್ಟ್ ವಿದ್ಯುತ್ ಕಾಮಗಾರಿ ನಿರ್ವಹಿಸುತ್ತಿರುವ ಪ್ರಯುಕ್ತ ಮಾರ್ಚ್ 24ರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 02:30 ಗಂಟೆವರೆಗೆ ರಾಯಚೂರಿನ ಅಸ್ಕಿಹಾಳ, ಕೋಲ್ಡ್ ಸ್ಟೋರೇಜ್ ಎದುರುಗಡೆ, ಕೃಷ್ಣ ಮೇಡೌಸ್, ಬೈಪಾಸ್ ರೋಡ್, ಅಮರಾವತಿ ಲೇಔಟ್ ಹಾಗೂ ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08532-226386, 08532-231999, 9480845955 ಅಥವಾ 9448395624ಗೆ ಸಂಪರ್ಕಿಸಬಹುದಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

