ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇದೇ 25 ಬುಧವಾರದಂದು ರಾಯಚೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಾರ್ತಾಲಾಪ ಕಾರ್ಯಾಗಾರ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 10:30ಕ್ಕೆ ಕಾರ್ಯಕ್ರಮದ ಉದ್ಘಾಟನಾ ನೆರವೇರಲಿದ್ದು, ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
ಕಾರ್ಯಾಗಾರದ ಮೊದಲ ಅಧಿವೇಶನದಲ್ಲಿ ವಿಕಸಿತ ಭಾರತ: ಜಿ ರಾಮ್ ಜಿ ಯೋಜನೆ ಕುರಿತು ರಾಯಚೂರು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಶರಣ ಬಸವರಾಜ ಅವರು ಉಪನ್ಯಾಸ ನೀಡುವರು. ಅಪರಾಧ ವರದಿಗಾರಿಕೆಯ ಜವಾಬ್ದಾರಿಗಳ ಕುರಿತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಜೆ. ಕುಮಾರಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನ ಕುರಿತು ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಡಾ.ಸುರೇಂದ್ರ ಬಾಬು, ಕೃಷಿ, ತೋಟಗಾರಿಕಾ ವಲಯದ ಯೋಜನೆಗಳ ಅನುಷ್ಠಾನದ ಕುರಿತು ರಾಯಚೂರು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ತಿಪ್ಪಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಕುರಿತು ಇಲಾಖೆಯ ಉಪ ನಿರ್ದೇಶಕರಾದ ನವೀನ್ ಕುಮಾರ್ ಯು., ಹಣಕಾಸು ಸುರಕ್ಷತೆ ಮತ್ತು ಆರ್ಥಿಕ ಸಬಲೀಕರಣದ ಕುರಿತು ರಾಯಚೂರು ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಸುಧೀಂದ್ರ ಪಿ.ಆರ್. ಅವರು ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

