ಸಿಂಧನೂರು: ಮಾ 23 ಸನ್ ರೈಸ್ ಡಿ-ಫಾರ್ಮಸಿ , ನರ್ಸಿಂಗ್, ಪಾರಾ ಮೆಡಿಕಲ್ ಕಾಲೇಜು ಸಿಂಧನೂರಿನಲ್ಲಿ ಇಂದು ಶಹೀದ್ ದಿನಾಚರಣೆಯನ್ನು ಗೌರವಭಾವದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಹಾಗೂ ರಾಜಗುರು ಅವರ ತ್ಯಾಗವನ್ನು ಸ್ಮರಿಸಲಾಯಿತು. ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಮೌನಾಚರಣೆ ನಡೆಸುವ ಮೂಲಕ ಗೌರವ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥರು ದೇಶಭಕ್ತಿ, ತ್ಯಾಗ ಮತ್ತು ಧೈರ್ಯವು ಯುವ ಪೀಳಿಗೆಗೆ ಮಾರ್ಗದರ್ಶಕವಾಗಬೇಕು ಎಂದು ಹೇಳಿದರು. ವಿದ್ಯಾರ್ಥಿಗಳು ಶಹೀದರ ಆದರ್ಶಗಳನ್ನು ಅಳವಡಿಸಿಕೊಂಡು, ಉತ್ತಮ ನಾಗರಿಕರಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗದ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿ, ದೇಶಭಕ್ತಿಯ ಘೋಷಣೆಗಳನ್ನು ಕೂಗಿ ಶಹೀದರ ಸ್ಮರಣೆಯನ್ನು ಗಂಭೀರವಾಗಿ ಆಚರಿಸಿದರು, ಈ ಶಹೀದ್ ದಿನಾಚರಣೆ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮತ್ತು ಜವಾಬ್ದಾರಿತನವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿತು.

Leave a Reply

Your email address will not be published. Required fields are marked *