ಕೊಪ್ಪಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ಷಯರೋಗ ಮತ್ತು ಕುಷ್ಠರೋಗ ನಿರ್ಮೂಲನ ಅಧಿಕಾರಿಗಳ ಕಾರ್ಯಾಲಯದ ವತಿಯಿಂದ ಮಾರ್ಚ್ 24 ರಂದು *”ವಿಶ್ವ ಕ್ಷಯರೋಗ ದಿನಾಚರಣೆ”*ಯನ್ನು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 7.30 ಗಂಟೆಗೆ ಹಳೇ ಜಿಲ್ಲಾಸ್ಪತ್ರೆ ಆವರಣದಿಂದ ಜಾಥಾ ಆರಂಭವಾಗಲಿದೆ. ಇದು ಬಸ್ ನಿಲ್ದಾಣ, ಸಿಂಪಿ ಲಿಂಗಣ್ಣ ರಸ್ತೆ, ದಿವಟರ್ ವೃತ್ತ, ಜವಾಹರ ರಸ್ತೆ ಮಾರ್ಗವಾಗಿ ಸಾಹಿತ್ಯ ಭವನದವರೆಗೆ ಸಾಗಲಿದೆ. ಸಾರ್ವಜನಿಕರಲ್ಲಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸುವುದು ಈ ಜಾಥಾದ ಮುಖ್ಯ ಉದ್ದೇಶವಾಗಿದೆ.
ಬೆಳಿಗ್ಗೆ 10.00 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಕಾರ್ಯಕ್ರಮ ಜರುಗಲಿದ್ದು, ಗಣ್ಯರು ಭಾಗವಹಿಸಲಿದ್ದಾರೆ.
ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿ (NTEP) ಜಿಲ್ಲೆಯಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳು ತಿಳಿಸಿದ್ದಾರೆ.
ಕ್ಷಯರೋಗ (TB) ಎಂಬುದು ಕೇವಲ ಕಾಯಿಲೆಯಲ್ಲ, ಇದನ್ನು ಸರಿಯಾದ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಈ ಕೆಳಗಿನ ಮಾಹಿತಿಗಳನ್ನು ತಿಳಿದಿರಬೇಕು:ಎರಡು ವಾರಗಳಿಗಿಂತ ಹೆಚ್ಚು ಕಾಲದ ಕೆಮ್ಮು.
ಸಂಜೆಯ ಸಮಯದಲ್ಲಿ ಜ್ವರ ಕಾಣಿಸಿಕೊಳ್ಳುವುದು.
ತೂಕದಲ್ಲಿ ಗಣನೀಯ ಇಳಿಕೆ ಮತ್ತು ಹಸಿವಾಗದಿರುವುದು.
ಕಫದಲ್ಲಿ ರಕ್ತ ಬೀಳುವುದು ಮತ್ತು ಎದೆ ನೋವು.
ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕಫದ ಪರೀಕ್ಷೆ ಮತ್ತು ಎದೆಯ ಎಕ್ಸ್-ರೇ ಉಚಿತವಾಗಿ ಲಭ್ಯವಿದೆ.
ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಪೌಷ್ಟಿಕ ಆಹಾರಕ್ಕಾಗಿ ಪ್ರತಿ ತಿಂಗಳು ₹500/- ಗಳ ನೇರ ನಗದು ವರ್ಗಾವಣೆ (DBT) ಮಾಡಲಾಗುತ್ತದೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರು ಸಹ ಸರ್ಕಾರದ ಯೋಜನೆಯಡಿ ನೋಂದಾಯಿಸಿಕೊಂಡು ಸೌಲಭ್ಯ ಪಡೆಯಬಹುದು.
ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಿರಿ. ಕ್ಷಯರೋಗ ಮುಕ್ತ ಕೊಪ್ಪಳ ನಿರ್ಮಾಣಕ್ಕೆ ಕೈಜೋಡಿಸಿ.

Leave a Reply

Your email address will not be published. Required fields are marked *