ರಾಯಚೂರು ಮಾರ್ಚ್ 24 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಅಂಚೆ ಇಲಾಖೆಯ ರಾಯಚೂರು ವಿಭಾಗದಿಂದ ಎನ್-ಜಿನ್ ಅಂಚೆ ಕಚೇರಿ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 25ರ ಬೆಳಿಗ್ಗೆ 10 ಗಂಟೆಗೆ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಲಾಗಿದೆ.
ಮುಖ್ಯ ಅತಿಥಿಗಳಾಗಿ ಧಾರವಾಡದ ಎನ್.ಕೆ. ಪ್ರದೇಶ ಅಂಚೆ ಸೇವೆಗಳ ನಿರ್ದೇಶಕರಾದ ಶ್ರೀಹರ್ಷ ಎನ್,
ಧಾರವಾಡದ ಎನ್.ಕೆ. ಪ್ರದೇಶ ಸಹಾಯಕ ಪೋಸ್ಟ್ ಮಾಸ್ಟರ್ ಜನರಲ್ (ಬಿಡಿ) ಎಚ್.ಎಂ. ಮಂಜೇಶ್, ರಾಯಚೂರು ವಿಭಾಗದ ಅಂಚೆ ಅಧೀಕ್ಷಕರಾದ ಶಿವಾನಂದ ಆರ್.ಎಚ್., ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ. ಹನುಮಂತಪ್ಪ ಅವರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
