ರಾಯಚೂರು ಮಾರ್ಚ್ 25 (ಕರ್ನಾಟಕ ವಾರ್ತೆ): ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 16ನೇ ಅಂತರ್ ಮಹಾವಿದ್ಯಾಲಯಗಳ ಕ್ರೀಡಾಕೂಟಗಳು ಇದೇ ಮಾರ್ಚ್ 26 ರಿಂದ 28 ರವರೆಗೆ ಕೃಷಿ ವಿವಿಯ ಆವರಣದಲ್ಲಿ ಜರುಗಲಿದೆ.
ಈ ಕ್ರೀಡಾ ಕೂಟದಲ್ಲಿ ಪುರುಷ ಮತ್ತು ಮಹಿಳೆಯರ 100ಮೀಟರ್ ಓಟ, 200 ಮೀಟರ್ ಓಟ, 5000 ಮೀಟರ್ ಓಟ, 10,000ಮೀಟರ್ ಓಟ, ಜೊತೆಗೆ ಪೋಲ್ ವಾಲ್ಟ್, ಜಾವೆಲಿನ್ ಎಸೆತ, 4*400 ರಿಲೇ ಓಟಗಳು ನಡೆಯಲಿದ್ದು. ಇದರಲ್ಲಿ ಒಟ್ಟು 70 ವಿದ್ಯಾರ್ಥಿನಿಯರನ್ನೊಳಗೊಂಡಂತೆ ಒಟ್ಟು 125 ವಿದ್ಯಾರ್ಥಿಗಳು ಭಾಗವಹಿಸುವರು.
ಈ ಕ್ರೀಡಾ ಕೂಟದಲ್ಲಿ ಕೃಷಿ ಮಹಾವಿದ್ಯಾಲಯ ರಾಯಚೂರು, ಕೃಷಿ ತಾಂತ್ರಿಕ ಮಹಾವಿದ್ಯಾಲಯ ರಾಯಚೂರು, ಕೃಷಿ ಮಹಾವಿದ್ಯಾಲಯ ಭೀಮರಾಯನಗುಡಿ, ಕೃಷಿ ಮಹಾವಿದ್ಯಾಲಯ ಕಲಬುರಗಿ, ಕೃಷಿ ಮಹಾವಿದ್ಯಾಲಯ ಗಂಗಾವತಿ ಹಾಗೂ ಕೃಷಿ ಮಹಾವಿದ್ಯಾಲಯ ಹಗರಿ, ಗಳು ಭಾಗವಹಿಸಲಿವೆ.
ಕ್ರೀಡಾಕೂಟಕ್ಕೆ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಡಾ. ಎಂ. ಹನುಮಂತಪ್ಪ ಅವರು ಚಾಲನೆ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾನ್ಯ ವಿಧಾನ ಪರಿಷತ್ ಸದಸ್ಯರು ಹಾಗೂ ಗೌರವಾನ್ವಿತ ವ್ಯವಸ್ಥಾಪನಾ ಮಂಡಳಿಯ ಸದಸ್ಯರಾದ ಶರಣಗೌಡ ಪಾಟೀಲ್ ಬಯ್ಯಾಪುರ ಅವರು ಭಾಗವಹಿಸಲಿದ್ದಾರೆ. ಗೌರವಾನ್ವಿತ ವ್ಯವಸ್ಥಾಪನಾ ಮಂಡಳಿಯ ಸದಸ್ಯರುಗಳಾದ ಬಸನಗೌಡ ಬ್ಯಾಗವಟ್, ಮಲ್ಲಿಕಾರ್ಜುನ ಡಿ., ಮಲ್ಲೇಶ ಕೊಲಿಮಿ, ಮಧುಸೂದನ್ ರೆಡ್ಡಿ, ತಿಮ್ಮಣ್ಣ ಸೋಮಪ್ಪ ಚಾವಡಿ ಹಾಗೂ ವಿಶ್ವವಿದ್ಯಾಲಯದ ಎಲ್ಲಾ ಅಧಿಕಾರಿವೃಂದ ಕೂಡ ಉಪಸ್ಥಿತರಿರುವರು ಎಂದು ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಡಾ.ರಾಜಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *