ರಾಯಚೂರು ಮಾರ್ಚ್ 25 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಾರ್ಚ್ 25ರ ಬುಧವಾರ ದಂದು 101 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ದ್ವಿತೀಯ ಭಾಷೆ ವಿಷಯದಲ್ಲಿ ಒಟ್ಟು 29,926 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 664 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ 3965 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 79 ವಿದ್ಯಾರ್ಥಿಗಳು ಗೈರಾಗಿದ್ದಾರೆ, ಲಿಂಗಸುಗೂರು ತಾಲ್ಲೂಕಿನಲ್ಲಿ 6095 ಹಾಜರಾಗಿ 113 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮಾನ್ವಿ ತಾಲ್ಲೂಕಿನಲ್ಲಿ 5367 ವಿದ್ಯಾರ್ಥಿಗಳು ಹಾಜರಾಗಿ 164 ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಯಚೂರು ತಾಲ್ಲೂಕಿನಲ್ಲಿ 8981 ಹಾಜರಾಗಿದ್ದು, 228 ವಿದ್ಯಾರ್ಥಿಗಳು ಗೈರಾಗಿದ್ದಾರೆ ಹಾಗೂ ಸಿಂಧನೂರು ತಾಲ್ಲೂಕಿನಲ್ಲಿ 5518 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 88 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

