ತಾಳಿಕೋಟಿ: ತಾಲೂಕಿನ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೃಷಿ ಸಂಸ್ಕರಣ ಘಟಕದಡಿ ತಾಡಪಾಲು ವಿತರಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸಾಮಾನ್ಯ ವರ್ಗದವರು ಆಧಾರ್ ಕಾರ್ಡ್, ಪಹಣಿ ಪತ್ರಿಕೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಸಮೇತ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ರೈತರು ಕಡ್ಡಾಯವಾಗಿ ಎಫ್ ಐ ಡಿ ಸಂಖ್ಯೆ ಹೊಂದಿರಬೇಕು.
ಭರ್ತಿ ಮಾಡಿದ ಅರ್ಜಿಗಳನ್ನು ಏಪ್ರಿಲ್ 04ನೇಯ ತಾರೀಖಿನ ಒಳಗಾಗಿ ರೈತ ಸಂಪರ್ಕ ಕೇಂದ್ರದಲ್ಲಿ ಸಲ್ಲಿಸಬೇಕು. ಹಿಂದಿನ ಎರಡು ವರ್ಷದಲ್ಲಿ ತಾಡಪಾಲ್ ಪಡೆದವರು ಮತ್ತೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಏಪ್ರಿಲ್ 07ನೇ ತಾರೀಕಿನಂದು ರೈತ ಸಂಪರ್ಕ ಕೇಂದ್ರದಲ್ಲಿ ಸೀಕೃತವಾದಂತಹ ಅರ್ಜಿಗಳನ್ನು ಪರಿಶೀಲಿಸಿ ಲಾಟರಿ ಪದ್ಧತಿ ಮುಖಾಂತರ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಕೃಷಿ ಅಧಿಕಾರಿ ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *