ತಾಳಿಕೋಟಿ: ತಾಲೂಕಿನ ನಾವದಗಿ ಬ್ರಹನ್ಮಠದ ಷ.ಬ್ರ.ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಕವಿತಾಳದ ಶ್ರೀ ಮಠದಿಂದ ಗೌರವ ಸಮರ್ಪಣೆ ಸಲ್ಲಿಸಲಾಯಿತು. ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಸುಕ್ಷೇತ್ರ ಕವಿತಾಳ ಪಟ್ಟಣದಲ್ಲಿ ಲಿಂಗೈಕ್ಯ ಸಿದ್ದಲಿಂಗ ಮಹಾಸ್ವಾಮಿಗಳ 50ನೇ ಪುಣ್ಯ ಸ್ಮರಣೋತ್ಸವ ಹಾಗೂ ಶ್ರೀ ಮ.ನಿ.ಪ್ರ. ಅಭಿನವ ಸಿದ್ದಲಿಂಗ ಮಹಾಸ್ವಾಮಿಗಳ 36ನೇ ಜನ್ಮ ವರ್ಧಂತಿ ಮಹೋತ್ಸವದ ನಿಮಿತ್ಯವಾಗಿ ಹಮ್ಮಿಕೊಂಡ ಮಹಾ ಶಿವಶರಣೆ ಇಟಗಿ ಶ್ರೀ ಭೀಮಾಂಬಿಕೆ ಪುರಾಣ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಪೂಜ್ಯ ಷ.ಬ್ರ. ಶ್ರೀ ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯ ಮಹಾಸ್ವಾಮಿಗಳು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಧರ್ಮ ಜಾಗೃತಿ ಮೂಡಿಸಲು ಶ್ರಮಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಈ ಗೌರವ ಸಮರ್ಪಣೆಯನ್ನು ಮ.ನಿ.ಪ್ರ.ಶ್ರೀ ಅಭಿನವ ಸಿದ್ದಲಿಂಗ ಮಹಾಸ್ವಾಮಿಗಳು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ನಾಡಿನ ಹರ ಚರ ಗುರುಮೂರ್ತಿಗಳು, ರಾಜಕೀಯ ದುರೀಣರು, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು ಪಟ್ಟಣದ ಹಿರಿಯರು ಗಣ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಇದ್ದರು.

