ಮಾನ್ವಿ: ತಾಲೂಕಿನ ಕುರ್ಡಿ ಗ್ರಾಮದಲ್ಲಿನ ವಿದ್ಯಾನಿಧಿ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕ್ಷೇತ್ರ ಶಿಕ್ಷಣ ಇಲಾಖೆ ವತಿಯಿಂದ ನಡೆದ ಕುರ್ಡಿ ಮತ್ತು ಗೊರ್ಕಲ್ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಯದ್ದಲದೊಡ್ಡಿ ಸುವರ್ಣಗಿರಿ ವಿರಕ್ತಮಠದ ಶ್ರೀ ಮಾಹಾಲಿಂಗ ಮಹಾಸ್ವಾಮಿಗಳು ಉದ್ಘಾಟಿಸಿ ಆಶಿರ್ವಾಚನ ನೀಡಿ ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರುವಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಸಹಕಾರಿಯಾಗಿವೆ ಗುರುಗಳು ತಮ್ಮ ಶಾಲೆಯ ವಿದ್ಯಾರ್ಥಿಗಳಲ್ಲಿ ಶಿಕ್ಷಣದೊಂದಿಗೆ ಸಾಂಸ್ಕರ,ಒಳ್ಳೆಯ ಗುಣಗಳನ್ನು ಬೆಳೆಸುವ ಕಾರ್ಯವನ್ನು ಮಾಡಿದಾಗ ಮಾತ್ರ ವಿದ್ಯಾರ್ಥಿಗಳು ಮುಂದಿನ ಉತ್ತಮ ಪ್ರೇಜೆಗಳಾಗುವುದಕ್ಕೆ ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕುರ್ಡಿ ಮತ್ತು ಗೊರ್ಕಲ್ ವಲಯದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಭಾರತನಾಟ್ಯ,ಗಾಯನ, ಜನಪದ ನೃತ್ಯ ಪ್ರದರ್ಶನ, ಛಾದ್ಮವೇಶ ಸೇರಿದಂತೆ ವಿವಿಧ ಸ್ಪರ್ಧೇಗಳಲ್ಲಿ ಉತ್ತಮ ಪ್ರದರ್ಶನ ನೀಡಿದರು,ಸ್ಪರ್ಧೇಗಳಲ್ಲಿ ವಿಜೇತರಾದ ವಿವಿಧ ಶಾಲೆಯ ಮಕ್ಕಳಿಗೆ ಬಹುಮಾನಗಳನ್ನು ಹಾಗೂ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.
ವಿದ್ಯಾನಿಧಿ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಜಯದೇವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾ. ಅಧ್ಯಕ್ಷರಾದ ಸಂಗಮೇಶ ಮುಧೋಳ್, ಕುರ್ಡಿ ಮತ್ತು ಗೊರ್ಕಲ್ ವಲಯ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ವೆಂಕಟೇಶ್, ವಿದ್ಯಾನಿಧಿ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುರುಗಳಾದ ಅಖಿಲೇಶ್, ವಿಜಯ್ ಕುಮಾರ್ , ಪ್ರಭಾಕರ್ ಶೆಟ್ಟಿ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

