ಮಾನ್ವಿ : ಪಟ್ಟಣದ ಬಸವ ವೃತ್ತದಲ್ಲಿ ಹಿಂದೂಪರ ಸಂಘಟನೆಗಳ ವತಿಯಿಂದ ನಡೆದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ಕಲ್ಮಠ ಶ್ರೀ ವಿರೂಪಾಕ್ಷ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀರಾಮದೇವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಆಶೀರ್ವಚನ ನೀಡಿದರು. ಅಯೋಧ್ಯ ಪುರುಷ ಶ್ರೀರಾಮಚಂದ್ರ ಪ್ರಭುವಿನ ಆದರ್ಶವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಜೊತೆಗೆ ಶ್ರೀರಾಮರಾಜ್ಯದ ಕಲ್ಪನೆ ನೆರವೇರಲಿ ಎಂಬ ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಪಾನಕ ಹಾಗೂ ಮಜ್ಜಿಗೆ ವಿತರಣೆ ಮಾಡಲಾಗಿದ್ದು, ಭಕ್ತರು ಉತ್ಸಾಹದಿಂದ ಭಾಗವಹಿಸಿದರು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಸೌಹಾರ್ದತೆಯನ್ನು ಪ್ರತಿಬಿಂಬಿಸುವಂತೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ವಿಜಯೇಂದ್ರ ಇಭ್ರಮಾಪುರ್, ತಾಲೂಕು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಹರಿಹಾರಪಾಟೀಲ್, ಬಿಜೆಪಿ ಮಾನ್ವಿ ಮಂಡಲ ಅಧ್ಯಕ್ಷ ವೀರಭದ್ರಗೌಡ ಭೋಗವತಿ, ಅಖೀಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಅರುಣಕುಮಾರಚಂದಾ, ನಗರೇಶ್ವರ ರ‍್ಯವೈಶ್ಯ ಸಮಾಜದ ತಾಲೂಕು ಅಧ್ಯಕ್ಷ ಮುತ್ತುರಾಜ್ ಶೆಟ್ಟಿ, ಸುರೇಶನಾಡಗೌಡ, ವೀರೇಶನಾಯಕ ಬೆಟ್ಟದೂರು, ಮೌನೇಶ, ಸಂಗಮೇಶಗೌಡ, ರಾಜಶೇಖರಸ್ವಾಮಿ, ಪ್ರವೀಣ್ ಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


