ಕವಿತಾಳ ಮಾರ್ಚ್ 27: ಪಟ್ಟಣದ ಆರಾಧ್ಯ ದೈವ ಶ್ರೀ ತ್ರಿಯಂಭಕೇಶ್ವರ ವಾರ್ಷಿಕ ಜಾತ್ರಾ ಮಹೋತ್ಸವವು ಶ್ರೀರಾಮನವಮಿಯ ಪವಿತ್ರ ದಿನದಂದು ಅತ್ಯಂತ ಸಡಗರ-ಸಂಭ್ರಮ ಹಾಗೂ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅದ್ದೂರಿಯಾಗಿ ಜರುಗಿತು.
ಜಾತ್ರಾ ಮಹೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ ಹಾಗೂ ಅಲಂಕಾರ ಕಾರ್ಯಕ್ರಮಗಳು ನಡೆದವು.ಶ್ರೀ ತ್ರಿಯಂಭಕೇಶ್ವರ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು.ಈ ಭವ್ಯ ಮೆರವಣಿಗೆಯಲ್ಲಿ ಕವಿತಾಳ ಪಟ್ಟಣ ಮಾತ್ರವಲ್ಲದೆ, ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *