ಮಸ್ಕಿ: ತಾಲೂಕಿನ ಬಳಗಾನೂರು ಪಟ್ಟಣದ ಬಸವೇಶ್ವರ ನಗರದಲ್ಲಿ ನೂತನವಾಗಿ ಸ್ಥಾಪನೆ ಮಾಡಿರುವ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಮೂರ್ತಿ ಅನಾವರಣ ಕಾರ್ಯಕ್ರಮಕ್ಕೆ ಮಾ.29 ರಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹಾಗೂ ಯತೇಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆಂದು ಕುರುಬ ಸಮಾಜದ ಯುವ ಮುಖಂಡ ಆನಂದ ಕನಸಾವಿ ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಸಿದ್ದರಾಮನಂದಪುರಿ ಮಹಾಸ್ವಾಮಿಗಳು ದಿವ್ಯ ಪ್ರಭೆವಹಿಸಲಿದ್ದಾರೆ. ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಮೂರ್ತಿ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಸಂಸದ ಕೆ.ವಿರುಪಾಕ್ಷಪ್ಪ, ಸಂಸದ ರಾಜಶೇಖರ ಹಿಟ್ನಾಳ, ಶಾಸಕರಾದ ಆರ್.ಬಸನಗೌಡ ತುರವಿಹಾಳ, ದೊಡ್ಡನಗೌಡ ಪಾಟೀಲ್, ರಾಘವೇಂದ್ರ ಹಿಟ್ನಾಳ, ಕೆ.ಕರಿಯಪ್ಪ ಸೇರಿದಂತೆ ವಿವಿಧ ಮಠಧೀಶರು, ಮುಖಂಡರುಗಳು ಭಾಗವಹಿಸಲಿದ್ದಾರೆ. ಆದ್ದರಿಂದ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಂಗೋಳ್ಳಿ ರಾಯಣ್ಣ ಮೂರ್ತಿ ಅನಾವರಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.

Leave a Reply

Your email address will not be published. Required fields are marked *