ರಾಯಚೂರು ಮಾರ್ಚ್ 27 (ಕರ್ನಾಟಕ ವಾರ್ತೆ): ಪ್ರಸ್ತುತ ನಡೆಯುತ್ತಿರುವ 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಮಾರ್ಚ್ 30ರಂದು ನಡೆಯಬೇಕಿದ್ದ ತೃತೀಯ ಭಾಷೆ ಪರೀಕ್ಷೆಯನ್ನು ಮಾರ್ಚ್ 31ರ ಮಂಗಳವಾರಕ್ಕೆ ಮುಂದೂಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ನ್ನು ದಿನಾಂಕ: 18.03.2026 ರಿಂದ 02.04.2026ರವರೆಗೆ ನಡೆಸಲು ಮಂಡಳಿಯಿಂದ ದಿನಾಂಕ: 04.11.2025ರಂದು ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಅದರಂತೆ ಈಗಾಗಲೇ ಪರೀಕ್ಷೆಯು ಪ್ರಾರಂಭವಾಗಿರುತ್ತದೆ. ಈ ವೇಳಾಪಟ್ಟಿಯನ್ವಯ ತೃತೀಯ ಭಾಷೆ ಪರೀಕ್ಷೆಯನ್ನು ದಿನಾಂಕ: 30.03.2026ರಂದು ನಿಗಧಿಪಡಿಸಲಾಗಿತ್ತು. ಆದರೆ, ಸರ್ಕಾರದ ಅಧಿಸೂಚನೆಯನ್ವಯ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ದಿನಾಂಕ: 31.03.2026ರ ಮಂಗಳವಾರ ಬದಲಾಗಿ ದಿನಾಂಕ: 30.03.2026ರ ಸೋಮವಾರ ದಂದು ಸಾರ್ವತ್ರಿಕ ರಜಾ ದಿನವೆಂದು ಮಾರ್ಪಡಿಸಿ ಆದೇಶಿಸಲಾಗಿದೆ. ಈ ಸಂಬಂಧ ಅಧ್ಯಕ್ಷರು ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರ ಸುತ್ತೋಲೆ ದಿನಾಂಕ 26-03-2026ರನ್ವಯ ದಿನಾಂಕ 30.03.2026ರಂದು ನಿಗಧಿಪಡಿಸಲಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ದಿನಾಂಕ 31.03.2026ರ ಮಂಗಳವಾರದAದು ಈಗಾಗಲೇ ನಿಗದಿಪಡಿಸಿರುವ ಅವಧಿಯಲ್ಲಿ ನಡೆಸಲಾಗುವುದು. ಉಳಿದ ವಿಷಯದ ಪರೀಕ್ಷೆಗಳು ವೇಳಾಪಟ್ಟಿಯಂತೆ ಯಥಾವತ್ತಾಗಿ ನಡೆಯಲಿವೆ ಎಂದು ಶಾಲಾ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

