ಲಿಂಗಸಗೂರು : ಮಾ 29 ತಾಲೂಕು ಆಡಳಿತ ವತಿಯಿಂದ ಏಪ್ರಿಲ್ 5 ರಂದು ಮಾಜಿ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಂ ಅವರ ಜಯಂತಿಯನ್ನು ತಾಲ್ಲೂಕಿನಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.
ಪಟ್ಟಣದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಬಸವಣೆಪ್ಪ ಕಲಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಯಂತಿ ದಿನದಂದು ಬೆಳಿಗ್ಗೆ 8.30 ಕ್ಕೆ ಪಟ್ಟಣದ ಪದವಿ ಪೂರ್ವ ಕಾಲೇಜು ಮೈದಾನದಿಂದ ಬಾಬು ಜಗಜೀವನ್ ರಾಂ ಅವರ ಭಾವಚಿತ್ರದೊಂದಿಗೆ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗುವುದು , ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿವೆ.
ಮೆರವಣಿಗೆಯ ನಂತರ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಮಾರಂಭವನ್ನು
ಆಯೋಜಿಸಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಾಗೂ ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದರು.
ಅಂದು ಬೆಳಿಗ್ಗೆ 8 ಗಂಟೆಗೆ ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಮಹನೀಯರ ಜಯಂತಿಯನ್ನು ಆಚರಿಸುವಂತೆ ಸೂಚಿಸಲಾಗಿದೆ. ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು
ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸತ್ಯಮ್ಮ, ಡಿವೈಎಸ್‌ಪಿ ದತ್ತಾತ್ರೇಯ ಕರ್ನಾಡ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರವೀಂದ್ರ ಉಪ್ಪಾರ್, ಪುರಸಭೆ ಮುಖ್ಯಾಧಿಕಾರಿ ನಟರಾಜ್, ಜಗನಾಥ್ ಪ್ರವೀಣ್ ಭೋಗರ್ ಬಿಇಒ ಸುಜಾತ ಹೂನೂರು, ಜೆಸ್ಕಾಂ ಎಇಇ ಬನ್ನೆಪ್ಪ ಕರಿಬಂಟನಾಳ, ಅಬಕಾರಿ ಇನ್ಸ್‌ಪೆಕ್ಟರ್ ಲಕ್ಷ್ಮೀದೇವಿ, ಪಶು ವೈದ್ಯಾಧಿಕಾರಿ ಅಮರೇಗೌಡ, ಲೋಕೋಪಯೋಗಿ ಇಲಾಖೆಎಇಇ ಪ್ರಕಾಶ, ಕೆಆರ್‌ಡಿಎಲ್ ಎಇಇ ಹನುಮಪ್ಪ, ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ, ಹನುಮಂತಪ್ಪ ಕುಣೆಕೆಲ್ಲೂರು, ಮಹಾದೇವಪ್ಪ ಪರಾಂಪುರು, ರಮೇಶ್ ಗೋಸೆ, ಶರಣಪ್ಪ ಕಟ್ಟಿಮನಿ, ಮೋಹನ್ ಗೋಸ್ಲೆ , ಸೇರಿದಂತೆ ಹಲವರು ಇದ್ದರು.

