ಕಣ್ಣೂರು,
ದೇಶದಲ್ಲಿ ಶಾಂತಿ ಸೌಹಾರ್ದತೆ ಹಾಗೂ ಸಮ ಸಮಾಜ ನಿರ್ಮಾಣಕ್ಕಾಗಿ ಸೇರಿದಂತೆ ಸರ್ವಾಂಗಿನ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಕರ್ನಾಟಕ ರಾಜ್ಯದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಸಂದರ್ಭದಲ್ಲಿ ಮಾತನಾಡಿದರು.
ಕೇರಳ ವಿಧಾನಸಭಾ ಚುನಾವಣೆಯ ನಿಮಿತ್ತ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ಕೇರಳ ರಾಜ್ಯದ ತಿಕ್ಕರಿಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರೋಡ್ ಶೋ ಮೂಲಕ ಭರ್ಜರಿ ಪ್ರಚಾರ ನಡೆಸಿದರು.
ಕಾಂಗ್ರೆಸ್ ಪಕ್ಷ ಸ್ವತಂತ್ರ ಪೂರ್ವ ದಿಂದಲೂ ಅನೇಕ ಜನಪರ ಯೋಜನೆಯ ಗುರಿಯೊಂದಿಗೆ ಅಧಿಕಾರದಲ್ಲಿದ್ದಾಗ ಜನಪರ ಆಡಳಿತದ ನೀಡಿದ ಹೆಮ್ಮೆಯ ಪಕ್ಷವಾಗಿದೆ, ನಮ್ಮೆಲ್ಲರ ಐಕ್ಯತೆ ಹಾಗೂ ಸರ್ವ ಜನಾಂಗದ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷದ ಕೈ ಹಿಡಿಯಬೇಕು ಎಂದು ಮತಯಾಚನೆ ಮಾಡಿದರು.
ದೇಶದ ಆರ್ಥಿಕ ಸಾಮಾಜಿಕ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ಮಹತ್ತರವಾದ ಕೊಡುಗೆಯನ್ನು ನೀಡಿದೆ. ಸಾಮಾಜಿಕ ಸಮಾನತೆಗಾಗಿ, ಕಾಂಗ್ರೆಸ್ ಪಕ್ಷ ನೀಡಿದ ಎಲ್ಲಾ ಪ್ರಣಾಳಿಕೆಗಳ ಈಡೇರಿಕಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಈಗಾಗಲೇ ಕರ್ನಾಟಕ ಮತ್ತು ತೆಲಂಗಾಣದಲ್ಲಿ ನಮ್ಮ ಸರ್ಕಾರ ಆಡಳಿತದಲ್ಲಿದ್ದು ಚುನಾವಣೆಯಲ್ಲಿ ನೀಡಿದ ಎಲ್ಲಾ ಭರವಸೆಗಳನ್ನ ಈಡೇರಿಸುವ ಮೂಲಕ ಜನಮನ್ನಣೆಯನ್ನು ಗಳಿಸಿದ್ದೇವೆ. ದೇಶದಲ್ಲಿ ನುಡಿದಂತೆ ನಡೆಯುವ ಪಕ್ಷ ಯಾವುದಾದರು ಇದ್ದರೆ ಅದು ಕಾಂಗ್ರೆಸ್ ಪಕ್ಷ ಎಂದು ತಿಳಿಸಿದರು.
ನಂತರ ವಿವಿಧ ವಿಧಾನ ಸಭಾ ಕ್ಷೇತ್ರಗಳ ಬ್ಲಾಕ್ ಮಟ್ಟದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಚುನಾವಣೆ ಗೆಲುವಿನ ತಂತ್ರಗಾರಿಕೆಯ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಾರ್ಟಿನ್ ಜಾರ್ಜ್, ಕಣ್ಣೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಶಾಸಕರಾದ ವೇಣುಗೋಪಾಲ್ ಸೇರಿ ಮುಂಚೂಣಿಯ ನಾಯಕರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


