ಸಿಂಧನೂರು : ರಾಯಚೂರು ಜಿಲ್ಲಾ ಪೊಲೀಸ್, ಸಿಂಧನೂರು ಉಪ ವಿಭಾಗ, ಸಿಂಧನೂರು ನಗರ ಪೊಲೀಸ್ ಠಾಣೆ – ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆಯ 2024-25 ನೇ ಸಾಲಿನ ವಿಧಾನಸಭಾ ಶಾಸಕರ ವಾರ್ಡಗಳಲ್ಲಿ ಸಿಸಿ ಕ್ಯಾಮರಾ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಅನುದಾನದಲ್ಲಿ ಸಿಂಧನೂರು ನಗರ ವ್ಯಾಪ್ತಿಯಲ್ಲಿ ಬರುವ ಮುಖ್ಯರಸ್ತೆ ಮತ್ತು ವಾರ್ಡ ನಂ 01 ರಿಂದ 31 ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಅಡಿಯಲ್ಲಿ 12 ಪೊಲೀಸ್ ವಸತಿ ಗ್ರಹಗಳನ್ನು ಎಸ್ ಪಿ ಅರುಣಾಂಶ ಗಿರಿ ಅವರು ಉದ್ಘಾಟಿಸಿದರು…
ಉದ್ಘಾಟನೆಯ ನಂತರ ಮಾತನಾಡಿದ ಎಸ್.ಪಿ ಅರುಣಾಂಶು ಗಿರಿ ಅವರು, ಪೊಲೀಸ್ ಸಿಬ್ಬಂದಿ ಸಮಾಜದ ಭದ್ರತೆಗೆ ತಮ್ಮ ಕುಟುಂಬದಿಂದ ದೂರವಿದ್ದು ಸೇವೆ ಸಲ್ಲಿಸುತ್ತಾರೆ. ಅವರಿಗೆ ಉತ್ತಮ ವಸತಿ ಸೌಲಭ್ಯ ಒದಗಿಸುವುದು ಸರ್ಕಾರ ಹಾಗೂ ಜನಪ್ರತಿನಿಧಿಗಳ ಮಹತ್ವದ ಜವಾಬ್ದಾರಿಯಾಗಿದೆ. ಸುಸಜ್ಜಿತ ವಸತಿ ವ್ಯವಸ್ಥೆಯಿಂದ ಪೊಲೀಸ್ ಸಿಬ್ಬಂದಿಯ ಮನೋಬಲ ಹೆಚ್ಚಾಗಿ ಸಾರ್ವಜನಿಕ ಸೇವೆ ಇನ್ನಷ್ಟು ಪರಿಣಾಮಕಾರಿಯಾಗಿ ನಡೆಯಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ನಗರದ ಸಮಗ್ರ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಕೆ.ಕೆ.ಆರ್.ಡಿ.ಬಿ ಮ್ಯಾಕ್ರೋ ಯೋಜನೆಯಡಿ ₹1 ಕೋಟಿ 35 ಲಕ್ಷ ವೆಚ್ಚದಲ್ಲಿ ನಗರದ ಪ್ರಮುಖ ರಸ್ತೆ, ವೃತ್ತಗಳು ಹಾಗೂ 31 ವಾರ್ಡ್‌ಗಳಲ್ಲಿ 100 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಅಪರಾಧ ನಿಯಂತ್ರಣ, ಟ್ರಾಫಿಕ್ ನಿರ್ವಹಣೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಈ ವ್ಯವಸ್ಥೆ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಮಾತನಾಡಿ, ಪೊಲೀಸ್ ಇಲಾಖೆ ಬಲಿಷ್ಠವಾಗಿದ್ದರೆ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗುತ್ತದೆ. ಪೊಲೀಸರ ಕಲ್ಯಾಣಕ್ಕಾಗಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ. ದೊಡ್ಡ ಬಸವರಾಜ ಅವರು ಮಾತನಾಡಿ, ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕಾರ ಮನೋಭಾವದಿಂದ ನಡೆದುಕೊಂಡರೆ ಅಪರಾಧ ನಿಯಂತ್ರಣ ಸುಲಭವಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಿವೈಎಸ್‌ಪಿ ಚಂದ್ರಶೇಖರ, ವೈ. ನರೇಂದ್ರನಾಥ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು

