ಸಿಂಧನೂರು ಮಾರ್ಚ್ 30 : ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಪಕ್ಷದ ಶಕ್ತಿಶಾಲಿ ಅಭ್ಯರ್ಥಿ ಶ್ರೀ ಉಮೇಶ ಹುಲ್ಲಪ್ಪ ಮೇಟಿ ಅವರ ಪರವಾಗಿ ಭರ್ಜರಿ ಪ್ರಚಾರ ಕಾರ್ಯ ಸಾಗುತ್ತಿದೆ. ಈ ನಿಟ್ಟಿನಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಮತದಾರರಲ್ಲಿ ಹೊಸ ಉತ್ಸಾಹ ತುಂಬಿದರು.
ಶಾಸಕ ಹಂಪನಗೌಡ ಬಾದರ್ಲಿ ಅವರು ಪ್ರಮುಖ ನಾಯಕರಾದ ಎ. ವಸಂತ ಕುಮಾರ ಅವರೊಂದಿಗೆ ಸೇರಿ ಸೋಮವಾರ ಸುತಗುಂಡಾರ ಹಾಗೂ ನಾಯನೇಗಲಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಗಳಲ್ಲಿ ಭಾಗವಹಿಸಿ ಅಭ್ಯರ್ಥಿ ಪರ ಮತಯಾಚನೆ ಮಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಲಾಭ ಪ್ರತಿಯೊಬ್ಬರಿಗೂ ತಲುಪುತ್ತಿದೆ. ಈ ಅಭಿವೃದ್ಧಿ ಮುಂದುವರಿಯಲು ಉಮೇಶ ಮೇಟಿ ಅವರ ಗೆಲುವು ಅನಿವಾರ್ಯ ಎಂದು ಶಾಸಕರು ಪ್ರತಿಪಾದಿಸಿದರು.
ಪ್ರಚಾರದ ವೇಳೆ ಹೋದ ಕಡೆಯಲ್ಲೆಲ್ಲಾ ಜನರಿಂದ ಅಭೂತಪೂರ್ವ ಸ್ವಾಗತ ವ್ಯಕ್ತವಾಗುತ್ತಿದ್ದು, ಕಾಂಗ್ರೆಸ್ ಗೆಲುವಿನ ಮುನ್ಸೂಚನೆ ನೀಡುತ್ತಿದೆ.ಸುತಗುಂಡಾರ ಮತ್ತು ನಾಯನೇಗಲಿ ಗ್ರಾಮಗಳಲ್ಲಿ ನಡೆದ ಸಭೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡು ಶಕ್ತಿ ಪ್ರದರ್ಶನ ಮಾಡಿದರು.
ಈ ಸಭೆಯಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ ಉಮೇಶ ಹುಲ್ಲಪ್ಪ ಮೇಟಿ ಅವರು ಈ ಭಾಗದ ಮಣ್ಣಿನ ಮಗ. ಸಾಮಾನ್ಯ ಜನರ ಕಷ್ಟಗಳಿಗೆ ಸ್ಪಂದಿಸುವ ಗುಣ ಹೊಂದಿರುವ ಅವರಿಗೆ ಬಾಗಲಕೋಟೆಯ ಜನತೆ ಹೆಚ್ಚಿನ ಮತಗಳ ಅಂತರದಿಂದ ಜಯಶಾಲಿಯಾಗಿಸುವುದು ಖಚಿತ. ಕಾಂಗ್ರೆಸ್ ಪಕ್ಷದ ಮೇಲೆ ಜನರಿಟ್ಟಿರುವ ವಿಶ್ವಾಸ ಈ ಉಪಚುನಾವಣೆಯ ಫಲಿತಾಂಶದಲ್ಲಿ ಪ್ರತಿಫಲಿಸಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ನೂರಾರು ಬೆಂಬಲಿಗರು ಉಪಸ್ಥಿತರಿದ್ದು, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿದರು.

Leave a Reply

Your email address will not be published. Required fields are marked *