ಮುದಗಲ್: ಸಹನಾ ಶಾಲೆಯಲ್ಲಿ 15ನೇ ವಾರ್ಷಿಕೋತ್ಸವ ಸಮಾರಂಭವು ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಸ್ಥಳೀಯ ಗಣ್ಯರು ಹಾಗೂ ಶಾಲೆಯ ಆಡಳಿತ ಮಂಡಳಿ ಸದಸ್ಯರು ಸಸಿಗೆ ನೀರೆರುದುವರ ಮೂಲಕ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಿ.ಡಿ.ಎಂ ಮಾಪಾಶ ಮಾತನಾಡಿ ಶಿಕ್ಷಕರ ಜೊತೆ ಪಾಲಕರ ಸಹಕಾರ ಮಕ್ಕಳ ಬೆಳವಣಿಗೆಗೆ ಅತ್ಯವಶ್ಯಕ ಎಂದು ವಿವರಿಸಿ,ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಭಾಷಣ ಮಾಡಿದರು. ಶಿಕ್ಷಣದ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಪ್ರೋತ್ಸಾಹಿಸಿದರು.
ವಿದ್ಯಾರ್ಥಿಗಳು ನೃತ್ಯ, ಸಂಗೀತ, ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅದ್ಭುತವಾಗಿ ಪ್ರದರ್ಶಿಸಿ ಎಲ್ಲರ ಮನಸೂರೆಗೊಂಡರು. ವಿಶೇಷವಾಗಿ ಬಾಲಕಿಯರ ನೃತ್ಯ ಪ್ರೇಕ್ಷಕರಿಂದ ಹೆಚ್ಚಿನ ಮೆಚ್ಚುಗೆ ಪಡೆದವು.
ಶಾಲೆಯ ಮುಖ್ಯ ಶಿಕ್ಷಕರು ವಾರ್ಷಿಕ ವರದಿಯನ್ನು ಮಂಡಿಸಿ, ಕಳೆದ ವರ್ಷದ ಸಾಧನೆಗಳನ್ನು ವಿವರಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷರು ಶ್ರೀಮತಿ ಇರ್ಫಾನ ಬೇಗಂ ಮಾತನಾಡಿ ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಮತ್ತು ಮಕ್ಕಳಿಗೆ ಸಮಯದ ಮಹತ್ವವನ್ನು ತಿಳಿಸಿದರು. ಶಾಲೆಯ ಕಾರ್ಯದರ್ಶಿಯವರಾದ ಎಂ.ಡಿ ಜಾವಿದ್ ಹುಸೇನ್ ರವರು ಮಾತನಾಡಿ ಮಕ್ಕಳು ಕಲಿಕೆಯ ಜೊತೆಗೆ ಒಳ್ಳೆಯ ಸಂಸ್ಕಾರ ಬೆಳೆಸಿಕೊಳ್ಳಬೇಕು ಹಾಗೂ ಮಕ್ಕಳು ಪ್ರತಿಯೊಂದು ಕೆಲಸದಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು., ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಆಯಿಷ ಬೇಗಂ, ಹೀನ ಬೇಗಂ, ಪ್ರಿಯಾಂಕ,ಕವಿತಾ, ಕಾವೇರಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕಿಯಾದ ಅಸ್ಮ ಬೇಗಂ ನಿರೂಪಿಸಿದರು.
ಈ ಸಮಾರಂಭದಲ್ಲಿ ಪಾಲ್ಗೊಂಡ ಪೋಷಕರು ಹಾಗೂ ಸಾರ್ವಜನಿಕರು ವಿದ್ಯಾರ್ಥಿಗಳ ಪ್ರತಿಭೆಯನ್ನು ಕೊಂಡಾಡಿದರು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

