ಮಾನ್ವಿ: ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯ ಪಿ.ಯು.ಕಾಲೇಜಿನಲ್ಲಿ 2026-27ನೇ ಸಾಲಿಗೆ ವಿಜ್ಞಾನ ವಿಭಾಗದ ಪ್ರಥಮ ವರ್ಷದ ಉಚಿತ ಮತ್ತು ಶುಲ್ಕ ರಿಯಾಯಿತಿ ಪ್ರವೇಶಕ್ಕಾಗಿ ಏ.3 ರಂದು ಬೆಳಿಗ್ಗೆ 10:30ಕ್ಕೆ ಪ್ರತಿಭಾನ್ವೇಶಣೆ ಪ್ರವೇಶ ಪರೀಕ್ಷೆ ಹಮ್ಮಿಕೊಳ್ಳಲಾಗಿದ್ದು ಪ್ರಸ್ತುತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ರಾಯಚೂರು ಜಿಲ್ಲೆಯ ಎಲ್ಲಾ ತಾಲೂಕಿನ ವಿದ್ಯಾರ್ಥಿಗಳು ಕೂಡ ಪರೀಕ್ಷೆಯನ್ನು ಬರೆಯಬಹುದಾಗಿದೆ ಪ್ರಥಮ ಬಹುಮಾನ ಲ್ಯಾಪ್‌ಟಾಪ್, ದ್ವಿತೀಯ ಬಹುಮಾನ ಸ್ಮಾರ್ಟ್ ಟ್ಯಾಬ್ ಇತರೆ ನಗದು ಬಹುಮಾನಗಳಿರುತ್ತವೆ ಹಾಗೂ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಮ್ಮ ಕಾಲೇಜಿನ ಪ್ರವೇಶ ಶುಲ್ಕದಲ್ಲಿ ಗಣನೀಯ ರಿಯಾಯಿತಿ ಹಾಗೂ 5 ಜನ ಟಾಪರ್ಸ್ಗೆ ಉಚಿತ ಪ್ರವೇಶ ನೀಡಲಾಗುತ್ತದೆ. ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆ ಬರೆಯಬಹುದು. ಶಾಲಾ ಗುರುತಿನ ಚೀಟಿ ಮತ್ತು 10ನೇ ತರಗತಿಯ ಹಾಲ್ ಟಿಕೆಟ್ ಕಡ್ಡಾಯವಾಗಿ ತರಬೇಕು. ಜಿಲ್ಲೇಯ ಪ್ರತಿಭಾವಂತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೆಚ್ಚಿನ ಮಾಹಿತಿಗಾಗಿ 9880706628 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ.ವಿಜಯಲಕ್ಷ್ಮೀ ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *