ಲಿಂಗಸಗೂರು : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವಾರು ನೀರು ಶುದ್ದೀಕರಣ ಘಟಕಗಳು ಯಾವುದೇ ಸರಿಯಾದ ನಿಯಮಾವಳಿ ಹಾಗೂ ಮಾನದಂಡಗಳನ್ನು ಪಾಲಿಸದೇ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ (ರಿ) ತಾಲೂಕ ಅಧ್ಯಕ್ಷ ತಿಮ್ಮರೆಡ್ಡಿ ಮುನ್ನೂರು ಸಹಾಯಕ ಆಯುಕ್ತರಿಗೆ ಮನವಿಯನ್ನು ಸಲ್ಲಿಸಿ ನಂತರ ಮಾತನಾಡಿದ ಅವರು
ಸಾರ್ವಜನಿಕರಿಗೆ ಪೂರೈಸಲಾಗುತ್ತಿರುವ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಗಂಭೀರ ಅನುಮಾನಗಳು ವ್ಯಕ್ತವಾಗುತ್ತಿವೆ.
ಅನೇಕ ಘಟಕಗಳು ಅಗತ್ಯ ಪರವಾನಗಿ ಪಡೆಯದೇ ಕಾರ್ಯನಿರ್ವಹಿಸುತ್ತಿದ್ದು, ನೀರಿನ ಗುಣಮಟ್ಟ ಪರೀಕ್ಷೆ ಕೂಡ ನಿಯಮಿತವಾಗಿ ನಡೆಯುತ್ತಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚಿಗಳು ಹಾಗೂ ಸರ್ಕಾರದ ನಿಯಮಗಳನ್ನು ಉಲ್ಲಂಘಿಸುವ ರೀತಿಯಲ್ಲಿ ಈ ಘಟಕಗಳು ಕಾರ್ಯನಿರ್ವಹಿಸುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಇದಲ್ಲದೆ ಈ ಅಕ್ರಮ ಚಟುವಟಿಕೆಗಳ ಬಗ್ಗೆ ಪುರಸಭೆ ಮುಖ್ಯಾಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ. ಪರಿಶೀಲನೆ ನಡೆಸುವ ಜವಾಬ್ದಾರಿ ಹೊಂದಿರುವ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಸಾರ್ವಜನಿಕರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಶುದ್ಧ ‘ಕುಡಿಯುವ ನೀರು’ ಜನರ ಮೂಲಭೂತ ಹಕ್ಕು, ಆದರೆ ಅಕ್ರಮವಾಗಿ ಕಾರ್ಯನಿರ್ವಹಿಸುವ ಘಟಕಗಳಿಂದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ತಕ್ಷಣವೇ ಒಂದು ವಾರದ ಒಳಗಾಗಿ ಈ ಶುದ್ಧ ನೀರಿನ ಘಟಕಗಳ ಪರಿಶೀಲನೆ ಮಾಡಿ, ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಿಸಿದ ಪುರಸಭೆ ಮುಖ್ಯಾಧಿಕಾರಿಗೆ ಸೂಚಿಸಬೇಕೆಂದು ಹೇಳಿದರು . ಈ ಸಂದರ್ಭದಲ್ಲಿ ರಮೇಶ್ ಗುತ್ತೇದಾರ , ಬಸವರಾಜ್ ಕಕ್ಕೇರಿ. ಯಲಪ್ಪ , ರವಿ ಗೋರೇಬಾಳ್ , ಅಶೋಕ್ ಗಸ್ತಿ , ಪ್ರವೀಣ್ ಕುಮಾರ್ ,
ಶ್ರೀಕಾಂತ್ ರೆಡ್ಡಿ ಮುನ್ನೂರು , ಈರಣ್ಣ ರೆಡ್ಡಿ , ಶ್ರೀರಾಮ್ ಸರ್ಜಾಪುರ , ಮೌನೇಶ್ ನಾಯಕ್ ಸೇರಿದಂತೆ ಇತರರು ಇದ್ದರು .

