ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಾರ್ಚ್ 31ರ ಮಂಗಳವಾರ 101 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ತೃತೀಯ ಭಾಷೆ ವಿಷಯದಲ್ಲಿ ಒಟ್ಟು 29,785 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 682 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ 3964 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 86 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಲಿಂಗಸುಗೂರು ತಾಲ್ಲೂಕಿನಲ್ಲಿ 6036 ಹಾಜರಾಗಿ 110 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮಾನ್ವಿ ತಾಲ್ಲೂಕಿನಲ್ಲಿ 5360 ವಿದ್ಯಾರ್ಥಿಗಳು ಹಾಜರಾಗಿ 165 ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಯಚೂರು ತಾಲ್ಲೂಕಿನಲ್ಲಿ 8862 ಹಾಜರಾಗಿದ್ದು 235 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಸಿಂಧನೂರು ತಾಲ್ಲೂಕಿನಲ್ಲಿ 5563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 86 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *