ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಭಾರತ ಸರ್ಕಾರ ಉದ್ಯಮ ಮತ್ತು ಅಂತರಿಕ ವ್ಯಾಪಾರ ಉತ್ತೇಜನ ಇಲಾಖೆ, ಸ್ಟಾರ್ಟ್ ಅಪ್ ಇಂಡಿಯಾ ಯೋಜನೆ ಹಾಗೂ ಜಿಲ್ಲಾಡಳಿತ ರಾಯಚೂರು ಇವರು ಸಂಯುಕ್ತಾಶ್ರಯದಲ್ಲಿ ತೇಜಸ್ ಕಾರ್ಯಾಗಾರವನ್ನು ಏಪ್ರಿಲ್ 2ರ ಬೆಳಿಗ್ಗೆ 10.30ಗಂಟೆಗೆ ನಗರದ ಕೃಷಿ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಉದ್ಘಾಟನೆ ನೆರವೇರಿಸುವರು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಘನ ಉಪಸ್ಥಿತಿ ವಹಿಸುವರು.
ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ಕ್ಷೇತ್ರದ ಶಾಸಕರಾದ ಜೆ.ಟಿ.ಪಾಟೀಲ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಲಿಂಗಸಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ.ವಜ್ಜಲ್, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಷಿ, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ್ ಬಿ.ಪಾಟೀಲ್, ವಿಧಾನ ಪರಿಷತ್ ಶಾಸಕರಾದ ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಆರ್ಥಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಿತೇಶಕುಮಾರ ಸಿಂಗ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್, ಭಾತರ ಸರ್ಕಾರದ ಡಿಪಿಐಐಟಿ ನಿರ್ದೇಶಕರಾದ ಡಾ.ಸುಮಿತ್ ಜರನಗಲ್, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಹನುಮAತಪ್ಪ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಶಿವಾನಂದ ಕೆಳಗಿನಮನಿ, ಐಐಐಟಿ ರಾಯಚೂರು ನಿರ್ದೇಶಕರಾದ ಪ್ರೋ.ಹರೀಶ್ ಕುಮಾರ್ ಸರ್ದಾನಾ ಅವರು ಭಾಗಿಯಾಗಲಿದ್ದಾರೆ.
ಗೌರವಾನ್ವಿತ ಆಹ್ವಾನಿತರಾಗಿ ಶಿಲ್ಪಾ ಮೆಡಿಕೇರ್ ಲಿಮಿಟೆಡ್ ಅಧ್ಯಕ್ಷರಾದ ವಿಷ್ಣುಕಾಂತ ಭುತಡ, ರಾಸಾಯನಿಕ ತಯಾರಿಕ ಸಂಘದ ಅಧ್ಯಕ್ಷರಾದ ಡಾ.ರಮೇಶ, ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ, ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ವಿ. ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ವಾಣಿಜ್ಯೋದ್ಯಮಿಗಳ ಸಂಘದ ಎಸ್. ಕಮಲ್ ಕುಮಾರ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
