ತಾಳಿಕೋಟಿ: ತಾಲೂಕ ಆಡಳಿತ,ತಾಲೂಕ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಮುದ್ದೇಬಿಹಾಳ ಹಾಗೂ ಪುರಸಭೆ ತಾಳಿಕೋಟಿ ಇವರ ಸಂಯುಕ್ತ ಆಶ್ರಯದಲ್ಲಿ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಮ್ ರವರ 119 ನೇ ಜಯಂತೋತ್ಸವವನ್ನು ಏಪ್ರಿಲ್ 5ರಂದು ಪಟ್ಟಣದಲ್ಲಿ ಆಚರಿಸಲಾಗುವುದು. ಅಂದು ಬೆಳಿಗ್ಗೆ 9-30 ಘಂಟೆಗೆ ತಾಲೂಕ ದಂಡಾಧಿಕಾರಿಗಳ ಕಾರ್ಯಾಲಯದಲ್ಲಿ ಪೂಜಾ ಕಾರ್ಯಕ್ರಮ ಜರುಗುವುದು ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಾಬು ಜಗಜೀವನ್ ರಾಮ್ ರವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯುವುದು. ಪಟ್ಟಣದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರ ಘನ ಉಪಸ್ಥಿತಿ ಇರುವುದು. ಕೆ ಎಸ್ ಡಿ ಎಲ್ ಅಧ್ಯಕ್ಷರು ಹಾಗೂ ಮುದ್ದೇಬಿಹಾಳ ಶಾಸಕರಾದ ಅಪ್ಪಾಜಿ ನಾಡಗೌಡರು ಅಧ್ಯಕ್ಷತೆ ವಹಿಸುವರು.ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲರ ಸಹ ಅಧ್ಯಕ್ಷತೆ ಇರುವುದು. ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ್ ಎನ್, ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಪ್ರಕಾಶ ಬಿ.ಹುಕ್ಕೇರಿ, ಸಂಸದ ರಮೇಶ ಚಂ.ಜಿಗಜಿಣಗಿ , ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ಆರ್ ನಿರಾಣಿ,ಸುನೀಲಗೌಡ ಬಿ.ಪಾಟೀಲ,ಪಿ.ಎಚ್.ಪೂಜಾರ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಅ.ಬಬಲೇಶ್ವರ, ಕರ್ನಾಟಕ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿಎಸ್ ಕವಲಗಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸಂಗಮೇಶ ದೇಸಾಯಿ ಆಗಮಿಸುವರು. ಸಹ ಶಿಕ್ಷಕಿ ಸಾಹಿತಿ ಮಡಿವಾಳಮ್ಮ ಎಸ್.ಜಿ. ನಾಗಗೌಡ ವಿಶೇಷ ಉಪನ್ಯಾಸ ನೀಡುವರು. ತಹಸಿಲ್ದಾರ್ ಡಾ.ವಿನಯಾ ಎ.ಹೂಗಾರ,ತಾಪಂ ಇಓ ಅನಸೂಯಾ ಚಲವಾದಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಬಸಂತಿ ಜಿ. ಮಠ,ಸಿಪಿಐ ಮೊಹಮ್ಮದ್ ಫಸಿವುದ್ದೀನ ಹಾಗೂ ಪುರಸಭೆ ಮುಖ್ಯಾಧಿಕಾರಿ ವಸಂತ್ ಪವಾರ ಉಪಸ್ಥಿತರಿರುವರು. ಸದರಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಗೆ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ತಾಲೂಕಾಡಳಿತದ ಪ್ರಕಟಣೆ ತಿಳಿಸಿದೆ.

