ರಾಯಚೂರು ಏಪ್ರಿಲ್ 01 (ಕರ್ನಾಟಕ ವಾರ್ತೆ): ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಏಪ್ರಿಲ್ 8ರ ಬೆಳಿಗ್ಗೆ 10.30ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಭೆಗೆ ಅಗತ್ಯ ಮಾಹಿತಿ ಹಾಗೂ ದಾಖಲೆಗಳೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಹಾಜರಾಗುವಂತೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

