ರಾಯಚೂರು ಏಪ್ರಿಲ್ 01 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು 2026ರ ಏಪ್ರಿಲ್ 4ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಕೈಗೊಂಡಿದ್ದಾರೆ.
ಅವರು ಏಪ್ರಿಲ್ 4ರ ಬೆಳಿಗ್ಗೆ 9ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ನಿರ್ಗಮಿಸಿ, ಬೆಳಿಗ್ಗೆ 11ಗಂಟೆಗೆ ರಾಯಚೂರು ಜಿಲ್ಲೆಯ ಸಿಂಧನೂರಿನ ಹೆಲಿಪ್ಯಾಡ್ ಆಗಮಿಸುವರು. ಬಳಿಕ 11.30ಕ್ಕೆ ಸಿಂಧನೂರಿನ ಶ್ರೀಕೃಷ್ಣದೇವರಾಯ ಸೈನಿಕ ಶಾಲೆಗೆ ರಸ್ತೆ ಮೂಲಕ ಪ್ರಯಾಣಿಸಿ, ಶ್ರೀಕೃಷ್ಣದೇವರಾಯ ಸೈನಿಕ ಶಾಲೆಯ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2ಗಂಟೆಗೆ ಸಿಂಧನೂರಿನ ಶ್ರೀಕೃಷ್ಣದೇವರಾಯ ಸೈನಿಕ ಶಾಲೆಯಿಂದ ರಸ್ತೆ ಮೂಲಕ ಸಿಂಧನೂರಿನ ಹೆಲಿಪ್ಯಾಡ್‌ಗೆ ಆಗಮಿಸಿ, 2.30ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳಾದ ಅಮರೇಶ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

