ಲಿಂಗಸಗೂರು – ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ನಂತರ ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಆರ್ಟಿಕಲ್ 370 ವಿಧಿಯನ್ನು ರದ್ದುಪಡಿಸುವಂತಹ ಧೈರ್ಯಶಾಲಿ ನಿರ್ಧಾರ ಕೈಗೊಳ್ಳಲಾಯಿತು. ಅಲ್ಲದೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವೂ ಸಾಧ್ಯವಾಯಿತು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು .

ಅವರಿಂದು ಪಟ್ಟಣದ ದೊಡ್ಡ ಹನುಮಂತ ದೇವಸ್ಥಾನದ ಮುಂಭಾಗ ಕ್ಷತ್ರೀಯ ಸಮಾಜ ಆಯೋಜಿಸಿದ್ದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು,

ದೇಶದ ಭದ್ರತಾ ವ್ಯವಸ್ಥೆ ಅತ್ಯಂತ ಬಲಿಷ್ಠವಾಗಿದ್ದು, ಇಂಟಲಿಜೆನ್ಸ್ ಹಾಗೂ ಸೈನ್ಯವು ಶಕ್ತಿಶಾಲಿಯಾಗಿದೆ. ಆದರೆ ಅವುಗಳನ್ನು ಸಮರ್ಥವಾಗಿ ಮುನ್ನಡೆಸಲು ಒಬ್ಬ ದೃಢ ನಾಯಕ ಅಗತ್ಯವಿತ್ತು. ಆ ನಾಯಕತ್ವವನ್ನು ನರೇಂದ್ರ ಮೋದಿ ಒದಗಿಸಿದ್ದಾರೆ ಎಂದು ಹೇಳಿದರು.
ಕೆಲ ಸಮುದಾಯಗಳ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ, ದೇಶಭಕ್ತಿ ಮತ್ತು ಧರ್ಮದ ವಿಷಯಗಳನ್ನು ಉಲ್ಲೇಖಿಸಿದರು. ಸಾರ್ವಜನಿಕ ಉತ್ಸವಗಳ ಸಂದರ್ಭದಲ್ಲಿ ಅಶಾಂತಿ ಸೃಷ್ಟಿಸುವವರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಜಕೀಯವಾಗಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ನಡೆಸಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ ಎಂದು ಆರೋಪಿಸಿದರು. ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಗ್ಯಾರಂಟಿ ಯೋಜನೆಗಳತ್ತ ಹೆಚ್ಚು ಗಮನ ಹರಿಸಿ. ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಲಾಗಿದೆ , ಬಜೆಟ್‌ನಲ್ಲಿ ಮುಸ್ಲಿಂಮರಿಗೆ ಹೆಚ್ಚಿನ ಅನುದಾನ ಮೀಸಲಿಡುವ ಮೂಲಕ ರಾಜ್ಯದಲ್ಲಿ ಮುಸ್ಲಿಂರನ್ನು ಓಲೈಸುವ , ದಲಿತರು ಹಾಗೂ ಹಿಂದುಳಿದ ವರ್ಗಗಳನ್ನು ನಿರ್ಲಕ್ಷಿಸುವ ಸರಕಾರ ಇದೆ. ಎಸ್‌ಇಪಿ ಮತ್ತು ಟಿಎಸ್‌ಪಿ ಯೋಜನೆಗಳ ಸಾವಿರಾರು ಕೋಟಿ ರೂ. ಹಣವನ್ನು ಬೇರೆಡೆಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಿದ ಅವರು, ಒಳಮೀಸಲಾತಿ ವಿಚಾರದಲ್ಲಿ ದಲಿತ ಸಮುದಾಯದ ಒಳಪಂಗಡಗಳಲ್ಲಿ ಅಸಮಾಧಾನವಿದೆ , ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಸಮರ್ಪಕ ಯೋಜನೆಗಳನ್ನು ಇದೇ ವೇಳೆ ವಾಲ್ಮೀಕಿ ಮತ್ತು ಬೋವಿ ನಿಗಮಗಳಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಸರ್ಕಾರ ಕ್ರಮ ಕೈಗೊಂಡಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಬಸವರಾಜ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ. 2.82 ಲಕ್ಷ ಹುದ್ದೆಗಳು ರಾಜ್ಯದಲ್ಲಿ ಖಾಲಿ ಇವೆ. ಈ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗುತ್ತಿಲ್ಲ. ಉದ್ಯೋಗ ಆಕಾಂಕ್ಷಿಗಳು ಪ್ರತಿಭಟನೆ ಮಾಡಿದರೆ ಪೊಲೀಸರಿಂದ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಸರ್ಕಾರ ಮಾಡುತ್ತಿದೆ. ಶಾಸಕರು ಸರ್ಕಾರಿ ನೌಕರರ ವರ್ಗಾವಣೆಯ ವ್ಯಾಪಾರವನ್ನು ರಾಜ್ಯದಲ್ಲಿ ಮಾಡುತ್ತಿದ್ದಾರೆಂದು ಟೀಕಿಸಿದರು. ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬದಲಾವಣೆ ಸಾಧ್ಯತೆ ಇದೆ ಎಂಬ ಸುಳಿವು ವಿಧಾನಸಭೆ ಅಧಿವೇಶನದಲ್ಲೇ ಗೋಚರಿಸಿದೆ. ಉಪಚುನಾವಣೆಯ ನಂತರ ಮುಖ್ಯಮಂತ್ರಿ
ಬದಲಾವಣೆ ಆಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸಿದರೆ ಪ್ರಾಮಾಣಿಕ ನಾಯಕತ್ವ ಬರುವುದಿಲ್ಲ, ಬದಲಿಗೆ ರಾಜ್ಯದ ಹಡಗು ಮುಳುಗಿಸುವವರ ಕೈಗೆ ಅಧಿಕಾರ ಹೋಗಬಹುದು, ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರಕ್ಕೆ ತೆರಳುವುದಾಗಿ ತಿಳಿಸಿದರು. ಆದರೆ ಬಿ.ವೈ. ವಿಜಯೇಂದ್ರ ಅವರ ಪರವಾಗಿ ಪ್ರಚಾರ ಮಾಡುವುದಿಲ್ಲವೆಂದು ಸ್ಪಷ್ಟಪಡಿಸಿದರು. ಹಿಂದೂಗಳು ಕರೆಯಿಸಿದರೆ ನಾನು ಪ್ರಚಾರಕ್ಕೆ ಹೋಗುತ್ತೇನೆ, ಬಿಜೆಪಿಗೆ ಮುಸ್ಲಿಂ ಸಮುದಾಯದ ಮತಗಳು ಬಂದರೆ ಸ್ವಾಗತಿಸುವುದಾಗಿ ಹೇಳಿದ ಯತ್ನಾಳ್, ಸಾಮಾನ್ಯವಾಗಿ ಬಿಜೆಪಿಗೆ ನೀಡುವುದಿಲ್ಲವೆಂದರು. ಆದಾಗ, ವಿಜಯಪುರ ಕ್ಷೇತ್ರದಲ್ಲಿ ಮುಸ್ಲಿಂ ಬಹುಳ್ಯ ಇದ್ದರೂ ತಾವು ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು. ಉತ್ತರ ಪ್ರದೇಶದಲ್ಲಿ ಯೋಗಿ ಆಧಿತ್ಯನಾಥ ಸರ್ಕಾರದ ನೇತೃತ್ವದ ಮಾದರಿಯಲ್ಲಿ ಕರ್ನಾಟಕದಲ್ಲೂ ಸರ್ಕಾರ ಬರಬೇಕು ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅಭಿನವಗಜದಂಡ ಶಿವಯೋಗಿ ಶಿವಾಚಾರ್ಯ ದೇವರಭೂಪೂರು ಇವರು ಕಾರ್ಯಕ್ರಮದ ಸಾನಿಧ್ಯವಹಿಸಿದ್ದರು.
ಶಾಸಕ ಮಾನಪ್ಪ ಡಿ ವಜ್ಜಲ್, ಮುಖಂಡರಾದ ಗಿರಿಮಲ್ಲನಗೌಡ ಪಾಟೀಲ್ ಕರಡಕಲ್, ಶಂಕರಗೌಡ ಅಮರಾವತಿ, ಸಮಾಜದ ಅಧ್ಯಕ್ಷ ಸತ್ಯನಾರಾಯಣ ಸಿಂಗ್, ರವಿಕುಮಾರ, ಮೋಹನಬಾಬು, ಚಂದಪ್ಪ ಕಟ್ಟಿಮನಿ, ದುರ್ಗಾಸಿಂಗ್, ಗೌತಮ್ ಕುಮಾರ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.

Leave a Reply

Your email address will not be published. Required fields are marked *