ಮಾನ್ವಿ : ತಾಲೂಕಿನ ನಕ್ಕುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಕರೆಗುಡ್ಡ ಗ್ರಾಮದಲ್ಲಿ ಹಳೆಯ ಅಂಗನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಂಥಾಲಯವು ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿರಲಿಲ್ಲ ಎಂದು ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಅಧ್ಯಕ್ಷರಾದ ಬಂಡೆಗುರು ಕರೇಗುಡ್ಡ ತಿಳಿಸಿದ್ದಾರೆ.
ಈ ಕುರಿತು ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆ ವತಿಯಿಂದ ಹಲವಾರು ಬಾರಿ ತಾಲೂಕ್ ಪಂಚಾಯತ್ ಕಾರ್ಯಾಲಯ ಮಾನ್ವಿಯ ಅಧಿಕಾರಿಯಾದ ಖಾಲೀದ್ ಅಹ್ಮದ್ ಅವರಿಗೆ ಮನವಿ ಪತ್ರಗಳನ್ನು ಸಲ್ಲಿಸಿ, ನಕ್ಕುಂದಿ ಗ್ರಾಮ ಪಂಚಾಯತಿಯಲ್ಲಿ ಹೋರಾಟ ನಡೆಸಲಾಗಿತ್ತು. ಅದರ ಫಲವಾಗಿ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ ಒದಗಿಸಲು ಕರೆಗುಡ್ಡ ಗ್ರಾಮದ ಸರ್ಕಾರಿ ಶಾಲೆಗೆ ಗ್ರಂಥಾಲಯವನ್ನು ಸ್ಥಳಾಂತರ ಮಾಡಲಾಗಿದೆ ಎಂದು ಹೇಳಿದರು.
ಈ ಕ್ರಮಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆ ವತಿಯಿಂದ ಅಭಿನಂದನೆಗಳನ್ನು ತಿಳಿಸಲಾಯಿತು.

