ರಾಯಚೂರು ನವೆಂಬರ್ 27 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸುವುದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನವೆಂಬರ್ 27ರಂದು ರಾಜಕೀಯ ಪಕ್ಷಗಳ ಪ್ರತಿನಿಗಳೊಂದಿಗೆ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು, ಭಾರತ ಚುನಾವಣಾ ಆಯೋಗವು ದಿನಾಂಕ 12.09.2025ರಂದು ಹೊರಡಿಸಿದ ವೇಳಾಪಟ್ಟಿಗನುಗುಣವಾಗಿ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ ಎಂದು ತಿಳಿಸಿದರು.
ಈ ಕರಡು ಮತದಾರರ ಪಟ್ಟಿಯ ಭೌತಿಕ ಪ್ರತಿಯು ಸಂಬAಧಪಟ್ಟ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ತಹಸೀಲ್ದಾರ ಕಚೇರಿಯಲ್ಲಿ ಲಭ್ಯವಿದ್ದು ಮತದಾರರು ಪರಿಶೀಲಿಸಿಕೊಳ್ಳಬಹುದಾಗಿದೆ. ಇದನ್ನು ಹೊರತುಪಡಿಸಿಯು ಸಹ ಸರ್ಕಾರದ ಅಧಿಕೃತ ಅಂರ್ತಜಾಲದಲ್ಲಿಯು ಸಹ ಮಾಹಿತಿಗಾಗಿ ಲಭ್ಯವಿದ್ದು ಇದನ್ನು ಮತದಾರರು ಅವಲೋಕಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಹೀಗೆ ಪಚುರಪಡಿಸಲಾದ ಕರಡು ಮತದಾರರ ಪಟ್ಟಿಯಲ್ಲಿ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬಂಧಪಟ್ಟ ಮತದಾರರು ಲಿಖಿತವಾಗಿ ಆಯಾ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಆಕ್ಷೇಪಣೆಯನ್ನು ಡಿಸೆಂಬರ್ 10ರವರೆಗೆ ಸಲ್ಲಿಸಬಹುದೆಂದು ಸಾರ್ವಜನಿಕರಿಗೆ ತಿಳಿಯಪಡಿಸಿದೆ ಎಂದರು.
ಇದನ್ನು ಹೊರತುಪಡಿಸಿಯು ಸಹ ಇದೊಂದು ನಿರಂತರ ನೋಂದಣಿ ಪ್ರಕ್ರಿಯೆಯಾಗಿರುವ ಹಿನ್ನೆಲೆಯಲ್ಲಿ, ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಅರ್ಹ ಮತದಾರರು ಅವಶ್ಯಕ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆಂದು ಅಪರ ಜಿಲ್ಲಾಧಿಕಾರಿಗಳು ಸಭೆಯ ಮೂಲಕ ಸಾರ್ವಜನರಿಕರಿಗೆ ತಿಳಿಸಿದರು. ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಪ್ರತಿನಿಧಿಗಳು, ಚುನಾವಣೆಯ ಶಾಖೆಯ ಶಿರಸ್ತೇದಾರರು ಇದ್ದರು.

Leave a Reply

Your email address will not be published. Required fields are marked *