ರಾಯಚೂರು ಏಪ್ರಿಲ್ 04 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರ ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಭಾರತ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜನ್ಮ ದಿನಾಚರಣೆಯನ್ನು ಏಪ್ರಿಲ್ 5ರ ಬೆಳಿಗ್ಗೆ 11.30ಗಂಟೆಗೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು, ಸಮಾಜದ ಎಲ್ಲಾ ಮುಖಂಡರು, ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *