ರಾಯಚೂರು ಏಪ್ರಿಲ್ 04 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ರಾಯಚೂರು ಶಿಶು ಅಭಿವೃದ್ದಿ ಯೋಜನೆ ರಾಯಚೂರು ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಅಂಗನವಾಡಿ ಕಾರ್ಯಕರ್ತೆ 01, ಸಹಾಯಕಿಯರು 17 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮುಖಾಂತರ ಈಗಾಗಲೇ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು, ಹುದ್ದೆಗಳಿಗೆ ಜಿಲ್ಲಾ ಆಯ್ಕೆ ಸಮಿತಿಯು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾತ್ಕಾಲಿಕವಾಗಿ ಆಯ್ಕೆ ಮಾಡಿರುವುದರಿಂದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಅಕ್ಷೇಪಣೆ ಅರ್ಜಿ ಸಲ್ಲಿಸುವವರು ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ: 13-04-2026ರೊಳಗಾಗಿ ಸಮಯ ಬೆಳಿಗ್ಗೆ ಬೆಳಿಗ್ಗೆ 08 ಗಂಟೆಯಿಂದ ಮಧ್ಯಾಹ್ನ 01.30ರವರೆಗೆ ಸಲ್ಲಿಸಬಹುದಾಗಿದೆ. ಅಕ್ಷೇಪಣೆ ಸಲ್ಲಿಸುವವರು ಅಕ್ಷೇಪಣೆ ಅರ್ಜಿಯ ಜೊತೆಗೆ ಯಾವುದೇ ದಾಖಲಾತಿಗಳು ಸಲ್ಲಿಸದಿದ್ದಲ್ಲಿ ಅಂತಹವರ ಅಕ್ಷೇಪಣೆ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಾರ್ಯಾಲಯ ರಾಯಚೂರು ಇವರನ್ನು ಸಂಪರ್ಕಿಸುವಂತೆ ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

