ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಂಗವಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ನಗರದಲ್ಲಿ ಬಿರುಸಿನ ಪ್ರಚಾರ ಕಾರ್ಯಕ್ರಮಗಳು ನಡೆದವು. ನಗರದ ವಿವಿಧ ಬಡಾವಣೆಗಳಲ್ಲಿ ನಡೆದ ಪ್ರಚಾರ ಸಭೆಗಳಲ್ಲಿ ಪ್ರಮುಖ ನಾಯಕರು ಭಾಗವಹಿಸಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರ ಪರವಾಗಿ ಮತಯಾಚನೆ ನಡೆಸಿದರು.
ಮಸ್ಕಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಆರ್. ಬಸನಗೌಡ ತುರ್ವಿಹಾಳ ಅವರು ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಾಧನೆಗಳು ಹಾಗೂ ಜನಪರ ಯೋಜನೆಗಳ ಬಗ್ಗೆ ವಿವರಿಸಿದರು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ಬದುಕಿಗೆ ಆಶಾಕಿರಣವಾಗಿದ್ದು, ಬಡವರು, ಮಹಿಳೆಯರು ಹಾಗೂ ಯುವಕರ ಅಭಿವೃದ್ಧಿಗೆ ಬಹುಮುಖ್ಯವಾಗಿದೆ ಎಂದು ಅವರು ಹೇಳಿದರು.ಅವರು ಮುಂದುವರಿಸಿ, “ಕಾಂಗ್ರೆಸ್ ಪಕ್ಷವು ಸದಾ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಪಕ್ಷವಾಗಿದ್ದು, ಅಭಿವೃದ್ಧಿ ಮತ್ತು ಕಲ್ಯಾಣಕ್ಕೆ ಆದ್ಯತೆ ನೀಡುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಸಮರ್ಥ ಶಾಮನೂರು ಅವರನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.ಇದೇ ವೇಳೆ ರಾಯಚೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಅವರು ಸಹ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿ, ರಾಜ್ಯ ಸರ್ಕಾರದ ವಿವಿಧ ಜನಪರ ಯೋಜನೆಗಳು, ಗ್ಯಾರಂಟಿಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಕಾಂಗ್ರೆಸ್ ಸರ್ಕಾರದ ಕಾರ್ಯಪದ್ದತಿ ಜನಮೆಚ್ಚುಗೆ ಗಳಿಸಿರುವುದರಿಂದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಭಾರಿ ಬೆಂಬಲ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ದಾವಣಗೆರೆ ಲೋಕಸಭಾ ಸದಸ್ಯೆಯಾದ ಶ್ರೀಮತಿ ಡಾ. ಪ್ರಭಾ ಮಲ್ಲಿಕಾರ್ಜುನ, ನಿರುಪಾದಪ್ಪ ವಕೀಲರು, ಶಂಕರಗೌಡ ಉಮಲೂಟಿ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.ನಗರದ ವಿವಿಧ ಭಾಗಗಳಲ್ಲಿ ನಡೆದ ಈ ಪ್ರಚಾರ ಸಭೆಗಳು ಜನರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ಕಾಂಗ್ರೆಸ್ ಪಕ್ಷದ ಪರ ಹಿತಕರ ವಾತಾವರಣ ನಿರ್ಮಾಣವಾಗುತ್ತಿರುವುದು ಸ್ಪಷ್ಟವಾಗಿ ಗೋಚರಿಸಿತು.

Leave a Reply

Your email address will not be published. Required fields are marked *