ತಾಳಿಕೋಟಿ: ತಾಲೂಕಿನ ಚಬನೂರ ಗ್ರಾಮದವರಾದ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಖ್ಯಾತ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ಇವರನ್ನು ಸಮಾಜ ಸೇವಾ ಕಾರ್ಯಗಳಿಗಾಗಿ ಅಗಸಬಾಳ ಗ್ರಾಮದಲ್ಲಿ ಶ್ರೀ ಮಾರುತೇಶ್ವರ ಜಯಂತೋತ್ಸವ ಹಾಗೂ ಜಾತ್ರೋತ್ಸವದ ಅಂಗವಾಗಿ ಹಮ್ಮಿಕೊಂಡ ನಾಟಕ ಉದ್ಘಾಟನೆ ಸಮಾರಂಭದಲ್ಲಿ ಸಮಿತಿ ವತಿಯಿಂದ ಗೌರವ ಸಮರ್ಪಣೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ರಾಜಕೀಯ ಧುರೀಣರು, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು, ಗ್ರಾಮದ ಗಣ್ಯರು ಹಾಗೂ ಹಿರಿಯರು ಉಪಸ್ಥಿತರಿದ್ದರು.

