ರಾಯಚೂರು ನವೆಂಬರ್ 27 (ಕರ್ನಾಟಕ ವಾರ್ತೆ): 2025–26ನೇ ಸಾಲಿನ ರ‍್ಯಾಂಪ್ ಯೋಜನೆಯಡಿ ಟ್ರೇಡ್ಸ್ ಅಂಡ್ ಈಎಸ್‌ಎಂ ಯೋಜನೆ ಕುರಿತು ಕೆಎಸ್‌ಎಂಸಿ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ, ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳಿಗೆ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವು ನಗರದ ರಂಜಿತಾ ಪ್ಯಾಲೇಸ್‌ನ ಸಭಾಂಗಣದಲ್ಲಿ ನವೆಂಬರ್ 29ರ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿರುವ ಎಲ್ಲಾ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಘಟಕಗಳ ಮುಖ್ಯಸ್ಥರು ಹಾಗೂ ಉದ್ಯಮಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರಾದ ಲಕ್ಷ್ಮೀಕಾಂತ ಕುಲಕರ್ಣಿ, ದೂರವಾಣಿ ಸಂಖ್ಯೆ; 8861241093ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
