ಮಾನ್ವಿ : ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆ ಅವರ ಪತ್ನಿ ಹಾಗೂ ಸಮಾಜ ಸೇವಕಿ ಹೇಮಾವತಿ ವಿ. ಹೆಗ್ಗಡೆ ಅವರ ಜನ್ಮದಿನದ ಅಂಗವಾಗಿ ಮಾನ್ವಿ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಟ್ರಸ್ಟ್ ವತಿಯಿಂದ ವಿಶೇಷ ಸೇವಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿಗಳಾದ ಸುನೀತಾ ಪ್ರಭು ಅವರು ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಿ ಮಾನವೀಯತೆ ಮೆರೆದರು. ಇಂತಹ ಸೇವಾ ಕಾರ್ಯಗಳು ಸಮಾಜದಲ್ಲಿ ಸಹಾನುಭೂತಿ ಹಾಗೂ ಪರಸ್ಪರ ಸಹಕಾರವನ್ನು ಹೆಚ್ಚಿಸುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾನ್ವಿ ವಲಯದ ಮೇಲ್ವಿಚಾರಕರಾದ ಮೈಲಾರಿ, ಕಚೇರಿ ಸಿಬ್ಬಂದಿಗಳಾದ ಬಸವಲಿಂಗಪ್ಪ, ಜ್ಞಾನವಿಕಾಸ ಸಮನ್ವಯಾಧಿಕಾರಿ ಜ್ಯೋತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *