ಸಿಂಧನೂರು : ಶಾಸಕರ ಕಾರ್ಯಾಲಯದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ. ರಾಜಶೇಖರ ಹಿಟ್ನಾಳ್ ಅವರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬುಗೌಡ ಬಾದರ್ಲಿ ಅವರು ಕೇಕ್ ಕತ್ತರಿಸುವ ಮೂಲಕ ಸಂಸದರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಂಸದರು ಸಾರ್ವಜನಿಕ ಜೀವನದಲ್ಲಿ ನೀಡುತ್ತಿರುವ ಸೇವೆಯನ್ನು ಸ್ಮರಿಸಿ ಮುಖಂಡರು ಅಭಿನಂದನೆ ಸಲ್ಲಿಸಿದರು. ಕ್ಷೇತ್ರದ ಅಭಿವೃದ್ಧಿ, ಮೂಲಸೌಕರ್ಯಗಳ ವೃದ್ಧಿ ಹಾಗೂ ಜನಪರ ಯೋಜನೆಗಳ ಅನುಷ್ಠಾನದಲ್ಲಿ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಉಪಸ್ಥಿತರಿದ್ದವರು ಅಭಿಪ್ರಾಯಪಟ್ಟರು.
ಹುಟ್ಟುಹಬ್ಬದ ಅಂಗವಾಗಿ ಕಾರ್ಯಕರ್ತರು ಸಂಸದರಿಗೆ ಪುಷ್ಪಗುಚ್ಛ ನೀಡಿ ಶುಭಾಶಯಗಳನ್ನು ತಿಳಿಸಿದರು. ಅಭಿಮಾನಿಗಳು ಕೇಕ್ ಕತ್ತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡರು, ಜನಪ್ರತಿನಿಧಿಗಳು, ಯುವ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮವು ಆತ್ಮೀಯತೆ ಮತ್ತು ಉತ್ಸಾಹಭರಿತ ವಾತಾವರಣದಲ್ಲಿ ನೆರವೇರಿತು.

Leave a Reply

Your email address will not be published. Required fields are marked *