ರಾಯಚೂರು ಏಪ್ರಿಲ್ 05 (ಕರ್ನಾಟಕ ವಾರ್ತೆ): ಜಿಲ್ಲೆಯ ದೇವದುರ್ಗ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇದ್ದ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 27 ಅಂಗನವಾಡಿ ಕಾರ್ಯಕರ್ತೆಯರ ಹುದ್ಧೆ ಮತ್ತು 76 ಸಹಾಯಕಿಯರ ಖಾಲಿ ಇದ್ದ ಹುದ್ದೆಗಳಿಗೆ ಜಿಲ್ಲಾ ಆಯ್ಕೆ ಸಮಿತಿಯು ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿರುವದರಿಂದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆ ಅರ್ಜಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ: 04.04.2026 ರಿಂದ 13.04.2026 ರೊಳಗೆ ಸಮಯ ಬೆಳಿಗ್ಗೆ 08:00 ಗಂಟೆಯಿಂದ ಮಧ್ಯಾಹ್ನ 01.30ರವರೆಗೆ ಸಲ್ಲಿಸಬಹುದಾಗಿದೆ.
ಆಕ್ಷೇಪಣೆ ಸಲ್ಲಿಸುವವರು ಆಕ್ಷೇಪಣೆ ಅರ್ಜಿಯ ಜೊತೆಗೆ ಯಾವುದೇ ದಾಖಲಾತಿಗಳು ಸಲ್ಲಿಸದಿದ್ದಲ್ಲಿ ಅಂಥವರ ಆಕ್ಷೇಪಣೆ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಡಾ.ಅರಷಿಣಿಗಿ ಬಿಲ್ಡಿಂಗ್ ನಗರಗುಂಡ ರೋಡ್, ದೇವದುರ್ಗ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ದೇವದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *