ರಾಯಚೂರು ಏಪ್ರಿಲ್ 05 (ಕರ್ನಾಟಕ ವಾರ್ತೆ): ಬೇಸಿಗೆ ನಿಮಿತ್ತ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಲಮೂಲಗಳ ಕೊರತೆ ಅಥವಾ ಜಲಮೂಲಗಳು ಬತ್ತಿಹೋಗುವ ಮೂಲಕ ತಲೆದೂರಬಹುದಾದ ಕುಡಿಯುವ ನೀರಿನ ಸಮಸ್ಯೆ ಹಾಗೂ ಅನೈರ್ಮಲ್ಯ ವಾತಾವರಣದಿಂದಾಗಿ ಉಂಟಾಗಬಹುದಾದ ಆನಾರೋಗ್ಯದ ಸಮಸ್ಯೆಗಳನ್ನು ಯಶಸ್ವಿಯಾಗಿ ನಿಯಂತ್ರಿಸಿ ಅಗತ್ಯ ಪರಿಹಾರ ಕಲ್ಪಿಸಲು ಆಯಾ ಗ್ರಾಮ ಪಂಚಾಯತಿ ಅಥವಾ ಸ್ಥಳೀಯ ಸಂಸ್ಥೆಗಳಿಂದ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಜಿಲ್ಲಾ ಪಂಚಾತಿಯ ಕುಂದುಕೊರತೆ ನಿವಾರಣಾ ಘಟಕದ ದೂರವಾಣಿ ಸಂಖ್ಯೆ: 08532-230539ಗೆ ಸಾರ್ವಜನಿಕರು ನೇರವಾಗಿ ಸಂಪರ್ಕಿಸಿ ತಮ್ಮ-ತಮ್ಮ ಕುಂದುಕೊರತೆ ಅಥವಾ ಆಹ್ವಾಲುಗಳನ್ನು ನೊಂದಾಯಿಸಿ ಪರಿಹಾರ ಪಡೆಯಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *