ಅರಕೇರಾ: ತಾಲೂಕಿನ ಮಲ್ಲೇದೇವರಗುಡ್ಡ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಂಜಮ್ಮ.ಕೆ ಅವರು ಉತ್ತಮ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ದೇವದುರ್ಗ ಪಟ್ಟಣದ ಸಾರ್ವಜನಿಕ ಕ್ಲಬ್ ಮೈದಾನದಲ್ಲಿ ಏಪ್ರಿಲ್ 7ರಂದು ಸಂಜೆ 4.30ಕ್ಕೆ ನಡೆಯಲಿರುವ ತಾಲೂಕಿನ ಮಹಿಳಾ ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ಮಹಿಳಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ ಕೂಡ ನಡೆಯಲಿದೆ.
ಮಂಜಮ್ಮ.ಕೆ ಅವರ ಸಾಧನೆಗೆ ಸಂಘ-ಸಂಸ್ಥೆಗಳ ಮುಖಂಡರು, ಗ್ರಾಮಸ್ಥರು ಹಾಗೂ ಶಿಕ್ಷಣಾಭಿಮಾನಿಗಳು ಅಭಿನಂದನೆ ವ್ಯಕ್ತಪಡಿಸಿದ್ದಾರೆ.
ಗಮನಾರ್ಹವಾಗಿ, ಜನವರಿ ತಿಂಗಳಲ್ಲಿ ನಡೆದ ದೇವದುರ್ಗ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲೂ ಮಂಜಮ್ಮ.ಕೆ ಅವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿತ್ತು.

