ರಾಯಚೂರು ಏಪ್ರಿಲ್ 06 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ ಮಾನವಿ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯ 06 ಅಂಗನವಾಡಿ ಕಾರ್ಯಕರ್ತೆ ಮತ್ತು 44 ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮುಖಾಂತರ ಈಗಾಗಲೇ ಅರ್ಜಿಗಳನ್ನು ಅಹ್ವಾನಿಸಲಾಗಿತ್ತು. ಆದರಂತೆ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕವಾಗಿ ಆಯ್ಕೆ ಮಾಡಿರುವದರಿಂದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಏಪ್ರಿಲ್ 13ರೊಳಗೆ ಸಲ್ಲಿಸಬಹುದಾಗಿದೆ.
ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆಯ್ಕೆ ಸಮಿತಿ ಇವರಿಂದ ಅನುಮೋದನೆಗೊಂಡ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 07 ದಿನ ಕೆಲಸದ ದಿನಗಳ ಕಾಲಾವಕಾಶ ನೀಡಲಾಗಿದೆ. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮಾತ್ರ ಖುದ್ದಾಗಿ ಕಚೇರಿಗೆ ಬಂದು ಆಕ್ಷೇಪಣೆ ಸಲ್ಲಿಸಬಹುದಾಗಿದೆ.
ಆಕ್ಷೇಪಣೆ ಸಲ್ಲಿಸುವವರು ನಿಖರವಾದ ದಾಖಲಾತಿಯೊಂದಿಗೆಆಕ್ಷೇಪಣೆ ಸಲ್ಲಿಸತಕ್ಕದ್ದು. ದಾಖಲೆ ಇಲ್ಲದಿದ್ದಲ್ಲಿ ಅಂತಹ ಆಕ್ಷೇಪಣೆಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ಮಾನವಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *