ರಾಯಚೂರು ಏಪ್ರಿಲ್ 06 (ಕರ್ನಾಟಕ ವಾರ್ತೆ): ರಾಯಚೂರು ತಾಲೂಕಿನ ಗಿಲ್ಲೆಸೂಗೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಬರುವ ಒಟ್ಟು 13 ಅಂಗನವಾಡಿ ಕಾರ್ಯಕರ್ತೆ ಹಾಗೂ ಒಟ್ಟು 29 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮುಖಾಂತರ ಈಗಾಗಲೇ ಅರ್ಜಿಗಳನ್ನು ಅಹ್ವಾನಿಸಲಾಗಿತ್ತು. ಆದರಂತೆ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕವಾಗಿ ಆಯ್ಕೆ ಮಾಡಿರುವದರಿಂದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಏಪ್ರಿಲ್ 13ರೊಳಗೆ ಸಲ್ಲಿಸಬಹುದಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳ ಕುರಿತು ಆಕ್ಷೇಪಣೆಗಳು ಇದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಏಪ್ರಿಲ್ 13ರವರೆಗೆ ಕಚೇರಿಯ ಅವಧಿಯೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಾರ್ಯಾಲಯ ಗಿಲ್ಲೆಸೂಗೂರು ಆಶಾಪೂರ್ ಕ್ರಾಸ್ ಸ್ಟೇಷನ್ ಏರಿಯಾ ರಾಯಚೂರು ಇಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಗಿಲ್ಲೆಸೂಗೂರು ಶಿಶು ಅಭಿವೃದ್ಧಿ ಯೋಜನ ಕಚೇರಿಯನ್ನು ಕಚೇರಿಯ ಸಮಯದಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ಗಿಲ್ಲೆಸೂಗೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
