ಜಾಲಹಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದ ಮುಂದೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (ಗ್ರಾಮ ಘಟಕ, ಜಾಲಹಳ್ಳಿ) ಹಾಗೂ ಕರ್ನಾಟಕ ರಾಜ್ಯ ಅಂಗವಿಕಲರ ಮತ್ತು ಪಾಲಕರ ಒಕ್ಕೂಟ (ಹೋಬಳಿ ಘಟಕ, ಜಾಲಹಳ್ಳಿ) ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಯಿತು.

📅 ಇಂದು ದಿನಾಂಕ 06-04-2026 (ಸೋಮವಾರ) ಬೆಳಗ್ಗೆ, ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದಲ್ಲಿ ಈ ಪ್ರತಿಭಟನೆ ಜರುಗಿತು.

ಈ ಸಂದರ್ಭದಲ್ಲಿ ಮುಖಂಡರಾದ ಎಲ್ಲಪ್ಪ ಮಾತನಾಡಿ, ಜಾಲಹಳ್ಳಿ ಗ್ರಾಮದ ಸರ್ವೇ ನಂ.117ರ ಸರ್ಕಾರಿ ಜಾಗದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದರು. ಈಗಿರುವ ಪರಿಸ್ಥಿತಿಯಿಂದ ವಾರ್ಡ್ ನಂ. 1, 2, 3ರ ನಿವಾಸಿಗಳಿಗೆ, ವಿಶೇಷವಾಗಿ ಮಹಿಳೆಯರಿಗೆ ತೀವ್ರ ತೊಂದರೆ ಆಗುತ್ತಿದ್ದು, ಇದರಿಂದ ಜನರಲ್ಲಿ ಆಕ್ರೋಶ ಉಂಟಾಗಿದೆ ಎಂದು ತಿಳಿಸಿದರು. ಜೊತೆಗೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಪ್ರಾರಂಭವಾಗಿಲ್ಲವೆಂದು ಆರೋಪಿಸಿದರು.

ಇದೇ ವೇಳೆ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಸಂಗಮೇಶ್ ಮೂಲಿಮನಿ ಮಾತನಾಡಿ,
ಜಾಲಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಹಲವು ವರ್ಷಗಳಿಂದ 15ನೇ ಹಣಕಾಸು ಯೋಜನೆಯಡಿ ವಿಕಲಚೇತನರ ಅಭಿವೃದ್ಧಿಗೆ ಮೀಸಲಾದ 5% ಅನುದಾನವನ್ನು ಬಳಸದೇ ಇರುವುದನ್ನು ಖಂಡಿಸಿದರು. ಈ ಕುರಿತು ಗ್ರಾಮ ಪಂಚಾಯತ್‌ಗೆ 150ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಗೂ ಸರ್ವೇ ನಂ.117ರಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣದ ಕುರಿತು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ವಿಳಂಬ ಧೋರಣೆ ತೋರಿದ್ದಾರೆ. ಇದರಿಂದ ವಾರ್ಡ್ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ಬೇಡಿಕೆಗಳನ್ನು ಲಿಖಿತ ರೂಪದಲ್ಲಿ ಈಡೇರಿಸುವ ಭರವಸೆ ಸಿಗುವವರೆಗೆ ಧರಣಿ ಹಿಂಪಡೆಯುವುದಿಲ್ಲವೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

👉 ನಂತರ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿಗಳು ಭೇಟಿ ನೀಡಿದರು.

ಅಧಿಕಾರಿಗಳು ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ಭರವಸೆ ನೀಡಿದ ನಂತರ, ಧರಣಿ ಸತ್ಯಾಗ್ರಹವನ್ನು ಹಿಂತೆಗೆದುಕೊಳ್ಳಲಾಯಿತು.

👥 ಈ ಸಂದರ್ಭದಲ್ಲಿ ಉಪಸ್ಥಿತರಿದ್ದವರು:
ಸಂಗಮೇಶ್ ಮೂಲಿಮನಿ, ಲಿಂಗಣ್ಣ ನಾಯಕ ಮಕಾಶಿ, ಶರಣಪ್ಪ ಕಾರಲಕುಂಟಿ, ಸುರೇಶ್ ಗೌಡ ಹಂಪರಗುಂದಿ, ತಮ್ಮಣ್ಣ, ಯಲ್ಲಪ್ಪ ಗಚ್ಚಿನಮನಿ, ನರಸಪ್ಪ ಪನ್ನೂರಗೌಡ, ನರೇಶ್ ಕುರುಕುಂದಿ, ಭಾಗಮ್ಮ, ಶಾಂತಮ್ಮ,
ಬೀಮರಾಯ ಮಕಾಶಿ, ಶಿವರಾಜ ಬಿದರಾಣಿ, ಬಸವರಾಜ ಗೋಪಳಾಪುರ, ಅಂಬಯ್ಯ ರಾಂಪಳ್ಳಿ, ಬಸವರಾಜ ನಾಗಮ್ಮ, ಸುಮಂಗಲ ಸೌದ್ರಿ, ಸಂಗಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.

👮‍♂️ ಧರಣಿ ವೇಳೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಒದಗಿಸಲಾಗಿತ್ತು.
ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ

Leave a Reply

Your email address will not be published. Required fields are marked *