ರಾಯಚೂರು ಏಪ್ರಿಲ್ 07 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು 2026ರ ಏಪ್ರಿಲ್ 8ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅವರು ಏಪ್ರಿಲ್ 7ರ ಸಂಜೆ 5ಗಂಟೆಗೆ ದಾವಣಗೆರೆಯಿಂದ ನಿರ್ಗಮಿಸಿ, ರಾತ್ರಿ 11ಗಂಟೆಗೆ ರಾಯಚೂರು ನಗರಕ್ಕೆ ಆಗಮಿಸಲಿದ್ದಾರೆ.
ಏಪ್ರಿಲ್ 8ರ ಬೆಳಿಗ್ಗೆ 10.30ಕ್ಕೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಗಳ ಕಚೇರಿಯ ಸಭಾಂಗಣದಲ್ಲಿ ರಾಯಚೂರು ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗಳು ಮತ್ತು ಜಾನುವಾರುಗಳಿಗೆ ಮೇವಿನ ಲಭ್ಯತೆಯ ಕುರಿತು ಜಿಲ್ಲಾಡಳಿತದೊಂದಿಗಿನ ಸಭೆಯಲ್ಲಿ ಭಾಗವಹಿಸುವರು.
ಮಧ್ಯಾಹ್ನ 12.30ಕ್ಕೆ ಎಪಿಎಮ್‌ಸಿ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ 2.30ಕ್ಕೆ ರಾಯಚೂರಿನಿಂದ ರಸ್ತೆ ಮಾರ್ಗವಾಗಿ ಕಲಬುರಗಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

