ರಾಯಚೂರು ಏಪ್ರಿಲ್ 07 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಎಪ್ರಿಲ್ 20ರಂದು ಬಸವ ಜಯಂತಿ, ಏಪ್ರಿಲ್ 21ರಂದು ಶ್ರೀಶಂಕರಾಚಾರ್ಯ ಜಯಂತಿ, ಏಪ್ರಿಲ್ 23ರಂದು ಭಗಿರಥ ಜಯಂತಿ ಹಾಗೂ ಮೇ. 01ರಂದು ಭಗವಾನ್ ಬುಧ್ಧ ಜಯಂತಿ ನಡೆಯಲಿವೆ.
ಈ ಜಯಂತಿಗಳ ಅಂಗವಾಗಿ ಏಪ್ರಿಲ್ 09ರ ಬೆಳಿಗ್ಗೆ 10ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸಮಾಜದ ಮುಖಂಡರು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉತ್ತರಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
