ಸಿಂಧನೂರು ಎಪ್ರಿಲ್ 07: ಆಡಳಿತ ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಮಣ್ಣಿಕೇರಿ ಕ್ಯಾಂಪ್ ನ ಸಮುದಾಯದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು
ಕಾರ್ಯಕ್ರಮದ ಕುರಿತು ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಶ್ವ ಆರೋಗ್ಯ ಸಂಸ್ಥೆ ಒಂದು ಥೀಮನ್ನು ಮುಂದಿಟ್ಟುಕೊಂಡು ಆರೋಗ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ ಆರೋಗ್ಯಕ್ಕಾಗಿ ಒಟ್ಟಾಗಿ ವಿಜ್ಞಾನ ದೊಂದಿಗೆ ನಿಲ್ಲೋಣ ಎಂಬ ಘೋಷವಾಕ್ಯದೊಂದಿಗೆ ಆಚರಣೆ ಮಾಡಲಾಗುತ್ತದೆ ಒಟ್ಟಾರೆ ಸಾರ್ವಜನಿಕರ ಆರೋಗ್ಯವನ್ನು ಕಾಪಾಡಬಹುದು ಹಾಗೂ ಹಾಗೂ ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಈ ದಿನಾಚರಣೆ ಉದ್ದೇಶವಾಗಿದೆ. ಅದಕ್ಕಾಗಿ ಪ್ರತಿಯೊಬ್ಬ ಸಾರ್ವಜನಿಕರು ತಮ್ಮ ಆರೋಗ್ಯದ ಕಡೆ ಗಮನ ಹರಿಸಬೇಕು ಹೆಚ್ಚಾಗಿ ತಾಯಿ ಮಕ್ಕಳ ಆರೈಕೆಯಲ್ಲಿ ಕಾಳಿಜಿ ವಹಿಸಬೇಕು ಪ್ರಶಕ್ತ ವಿದ್ಯುನ್ಮಾನದಲ್ಲಿ ಮುನ್ನಡೆಯುತ್ತಿರುವ ವಿಜ್ಞಾನದ ಜೊತೆಯಲ್ಲಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮಹತ್ವವಾಗಿದೆ. ಜ್ಞಾನವಿಲ್ಲದ ಜನತೆಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸರಿ ದಾರಿಯಲ್ಲಿ ನಡೆಯುವಂತೆ ಆರೋಗ್ಯ ಶಿಕ್ಷಣ ನೀಡುವುದು ಹಾಗೂ ಕಾಲಕಾಲಕ್ಕೆ ತೆಗೆದುಕೊಳ್ಳಬೇಕಾದ ಔಷಧಗಳ ಬಗ್ಗೆ ಅರಿವು ಮೂಡಿಸುವುದು ನೈರ್ಮಲ್ಯ ಪರಿಸರ ಸ್ವಚ್ಛತೆ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳುವುದು ಇವುಗಳ ಬಗ್ಗೆ ಅರಿವು ಮೂಡಿಸುವುದು ಈ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದರು.
ನಂತರ ಮಾತನಾಡಿದ ಪ್ರಾಥಮಿಕ ಆರೋಗ್ಯ ಸುರಕ್ಷತೆ ಅಧಿಕಾರಿ ನಿಂಗಮ್ಮ ಅವರು ಗರ್ಭಿಣಿಯ ಅವಧಿಯಲ್ಲಿ ಮತ್ತು ನಂತರದ ಹೆರಿಗೆಯ ಅವಧಿಯಲ್ಲಿ ತಾಯಿ ಮತ್ತು ಮಗುವಿನ ಹಾರೈಕೆ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದೆ ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮಹತ್ವವಾಗಿದೆ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ತಮ್ಮ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕೂಡ ಜಾಗೃತಿ ವಹಿಸಬೇಕು ಎಂದರು. ಈ ಸಂದರ್ಭದಲ್ಲಿ
ಆಶಾ ಕಾರ್ಯಕರ್ತೆ ಈರಮ್ಮ ತಾಯಂದಿರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು


