ತಾಳಿಕೋಟಿ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಜಯಂತಿಯನ್ನು ಏಪ್ರಿಲ್ 14ರಂದು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಇದಕ್ಕೆ ಎಲ್ಲರೂ ಸಹಕರಿಸಿ ಎಂದು ತಹಶೀಲ್ದಾರ್ ಗ್ರೇಡ್-2 ಪ್ರದೀಪ ದೇವಗಿರಿ ಹೇಳಿದರು. ಮಂಗಳವಾರ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕ ಆಡಳಿತ ವತಿಯಿಂದ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು. ಏಪ್ರಿಲ್ 14ರಂದು ಮುಂಜಾನೆ 9:00 ಘಂಟೆಗೆ ಡಾ.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅಲ್ಲಿಂದಲೇ ಬಾಬಾ ಸಾಹೇಬರ ಭಾವಚಿತ್ರದ ಭವ್ಯ ಮೆರವಣಿಗೆ ಆರಂಭಿಸಲಾಗುವುದು. ಮೆರವಣಿಗೆ ಸಕಲ ವಾದ್ಯ ಮೇಳಗಳೊಂದಿಗೆ ಪಟ್ಟಣದ ಅಂಬೇಡ್ಕರ್ ಸರ್ಕಲ್ ಅಂಬಾ ಭವಾನಿ ಮಂದಿರ ರಸ್ತೆ ಕತ್ರಿ ಬಜಾರ್ ಶಿವಾಜಿ ಸರ್ಕಲ್ ಮಹಾರಾಣಾ ಪ್ರತಾಪ್ ಸಿಂಹ ಸರ್ಕಲ್ ದಿಂದ ಬಸ್ ನಿಲ್ದಾಣದ ಮಾರ್ಗವಾಗಿ ಶ್ರೀ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ಸರ್ಕಲ್ಗೆ ತಲುಪುವುದು. ನಂತರ ಅಲ್ಲಿಯೇ ವೇದಿಕೆ ಕಾರ್ಯಕ್ರಮ ಜರಗುವುದು. ಜಯಂತಿಯನ್ನು ಸರ್ಕಾರದ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು. ಪಟ್ಟಣದ ಪ್ರಮುಖ ವೃತ್ತಗಳನ್ನು ಅಲಂಕರಿಸಲಾಗುವುದು ಬಾಬಾ ಸಾಹೇಬರ ತತ್ವ ಆದರ್ಶಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸಲು ಉಪನ್ಯಾಸ ಆಯೋಜಿಸಲಾಗುವುದು ಎಲ್ಲ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯುವಂತಾಗಲು ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕಿ ಬಿ.ಜಿ.ಮಠ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ವಹಿಸಿಕೊಟ್ಟ ಜವಾಬ್ದಾರಿಗಳನ್ನು ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಪಟ್ಟಣದ ಗಣ್ಯರಾದ ಎಸ್ ಬಿ ಕಟ್ಟಿಮನಿ, ಮುತ್ತಪ್ಪ ಚಮಲಾಪೂರ,ಕಾಶಿನಾಥ ಮುರಾಳ, ಬಸವರಾಜ ಕಟ್ಟಿಮನಿ, ಪ್ರಭುಗೌಡ ಮದರ್ಕಲ್, ಜೈ ಭೀಮ್ ಮುತ್ತಗಿ, ಪರಶುರಾಮ ತಂಗಡಗಿ, ಪ್ರಕಾಶ ಹಜೇರಿ,ನಾಗೇಶ ಕಟ್ಟಿಮನಿ, ಪರಶುರಾಮ ಕಟ್ಟಿಮನಿ, ಮಹೇಶ ಚಲವಾದಿ, ರಾಮಣ್ಣ ಕಟ್ಟಿಮನಿ,ಸಂಜೀವಪ್ಪ ಬರದೇನಾಳ, ಸಿದ್ದು ಬಾರಿಗಿಡದ, ಗೋಪಾಲ ಕಟ್ಟಿಮನಿ, ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ದಮ್ಮೂರಮಠ, ಸ.ಕ.ಇ. ಶಿವಲಿಂಗಪ್ಪ ಹಚಡದ, ಪಿಎಸ್ಐ ಜ್ಯೋತಿ ಖೋತ,ಡಾ.ಶ್ರೀಶೈಲ ಹುಕ್ಕೇರಿ,ಎಸ್.ಸಿ.ಪಾಟೀಲ,ಶಿರಸ್ತೆದಾರಜೆ.ಆರ್.ಜೈನಾಪೂರ, ಸಿಆರ್ ಸಿ ರಾಜು ವಿಜಾಪುರ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

