ಮಾನ್ವಿ ; ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಕುಡಿಯುವ ನೀರಿನ ಜಲಸಂಗ್ರಹಕ್ಕೆ ಭೇಟಿ ನೀಡಿದ ಪುರಸಭೆಯ ಮಾಜಿ ಅಧ್ಯಕ್ಷರು ಹಾಗೂ ನಗರ ಯೋಜನಾ ಪ್ರಾಧಿಕಾರದ ಹಾಲಿ ಅಧ್ಯಕ್ಷರಾದ ಅಬ್ದುಲ್ ಗಪೂರ್ ಸಾಬ್ ಹಾಗೂ ಮಾನ್ವಿ ತಾಲೂಕು ಪಂಚಾ ಗ್ಯಾರಂಟಿಗಳ ಅಧ್ಯಕ್ಷರಾದ ಶ್ರೀ ಬಿಕೆ ಅಮರೇಶಪ್ಪ ವಕೀಲರು, ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಾನ್ವಿ ಪುರಸಭೆಯ ಮುಖ್ಯಾಧಿಕಾರಿಯಾದ ಪರಶುರಾಮ್ ದೇವೆಮನೆಯವರಿಗೆ ಬೇಸಿಗೆ ಕಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಈ ವೇಳೆ ಮಾತನಾಡಿದ ಮುಖಂಡರು, ಬೇಸಿಗೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ನೀರಿನ ಬಳಕೆಯಲ್ಲಿ ಜಾಗೃತಿ ಅಗತ್ಯವಿದ್ದು, ನೀರು ಸಂಗ್ರಹಣೆ, ಸಮರ್ಪಕ ವಿತರಣೆ ಹಾಗೂ ಅನಾವಶ್ಯಕ ನೀರು ಪೋಲಾಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ವಿಧಾನ ಪರಿಷತ್ತಿನ ಸಭಾ ನಾಯಕರಾದ ಶ್ರೀ ಎನ್ ಎಸ್ ಬೋಸರಾಜು ಜೀ ಮತ್ತು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜಿ ಹಂಪಯ್ಯ ನಾಯಕ್ ಸಾಹುಕಾರ್ ಅವರು ರಾಜ್ಯ ಸರ್ಕಾರದ ಜನ ಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ರಾಯಚೂರು ಜಿಲ್ಲೆ ಹಾಗೂ ಮಾನ್ವಿ ಕ್ಷೇತ್ರದ ಗ್ರಾಮಗಳಿಗೆ ತುಂಗಭದ್ರ ಜಲಾಶಯದಿಂದ ನಿರಂತರವಾಗಿ ನೀರು ಹರಿಸಲಾಗುತ್ತಿದೆ ಎಂದು ತಿಳಿಸಿದರು.
ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಧಿಕಾರಿಗಳು ಸದಾ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದ್ದು, ಸಾರ್ವಜನಿಕರ ಅಗತ್ಯಗಳಿಗೆ ಪ್ರಾಮುಖ್ಯತೆ ನೀಡುವಂತೆ ಸಂಬಂಧಿಸಿದ ಇಲಾಖೆಗೆ ನಿರ್ದೇಶನ ನೀಡಲಾಗಿದೆ. ಈ ಸಂದರ್ಭದಲ್ಲಿ ಸ್ಥಳೀಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.


